ದೇಶಾದ್ಯಂತ 24 ಗಂಟೆಗಳಲ್ಲಿ 47,704 ಮಂದಿಯಲ್ಲಿ ಕೊರೋನಾ ಪತ್ತೆ: ಸೋಂಕಿತರ ಸಂಖ್ಯೆ 14.8 ಲಕ್ಷ, 33,425 ಮಂದಿ ಸಾವು

ದೇಶದಲ್ಲಿ ಕೊರೋನಾ ಅಬ್ಬರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 47,704 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 14,83,157ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ದೇಶದಲ್ಲಿ ಕೊರೋನಾ ಅಬ್ಬರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 47,704 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 14,83,157ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ. 

ಈ ನಡುವೆ ಒಂದೇ ದಿನ 654 ಮಂದಿ ಬಲಿಯಾಗಿದ್ದು, ದೇಶದಲ್ಲಿ ಕೊರೋನಾಗೆ ಸಾವನ್ನಪ್ಪಿದವರ ಸಂಖ್ಯೆ 33,425 ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ. 

ಇನ್ನು 14,83,157 ಮಂದಿ ಸೋಂಕಿತರ ಪೈಕಿ 9,52,744 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿನ್ನೂ 4,96,988 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ. 

ಮತ್ತೊಂದೆಡೆ ಮಹಾರಾಷ್ಟ್ರದಲ್ಲಿ ಹಲವು ದಿನಗಳ ಬಳಿಕ ಸೋಂಕು ಇಳಿಕೆ ಕಂಡಿದೆ. ದೆಹಲಿಯಲ್ಲಿ 2 ತಿಂಗಳಲ್ಲೇ ಕನಿಷ್ಟ 613 ಕೇಸ್ ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com