ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ಆಯೋಜನೆಯಲ್ಲಿ ತೊಡಗಿದ್ದ ಅರ್ಚಕ, 16 ಮಂದಿ ಪೊಲೀಸರಿಗೆ ಕೊರೋನಾ!

ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ಆಯೋಜನೆಯಲ್ಲಿ ತೊಡಗಿದ್ದ ಓರ್ವ ಅರ್ಚಕ ಹಾಗೂ ಕರ್ತವ್ಯನಿರತ 16 ಮಂದಿ ಪೊಲೀಸರಲ್ಲಿ ಕೊರೋನಾ ವೈರಸ್ ಪತ್ತೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಲಖನೌ: ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ಆಯೋಜನೆಯಲ್ಲಿ ತೊಡಗಿದ್ದ ಓರ್ವ ಅರ್ಚಕ ಹಾಗೂ ಕರ್ತವ್ಯನಿರತ 16 ಮಂದಿ ಪೊಲೀಸರಲ್ಲಿ ಕೊರೋನಾ ವೈರಸ್ ಪತ್ತೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಆಗಸ್ಟ್ 15 ರಂದು ರಾಮಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾಗಿಯಾಗಲಿದ್ದಾರೆ. ಇದಲ್ಲದೆ, ಕಾರ್ಯದಲ್ಲಿ ಇನ್ನೂ 50 ಮಂದಿ ವಿಐಪಿಗಳೂ ಕೂಡ ಪಾಲ್ಗೊಳ್ಳಲಿದ್ದಾರೆ. 

ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಂಡು, ಮಾರ್ಗಸೂಚಿಗಳನ್ನು ಅನುಸರಿಸುವುದರೊಂದಿಗೆ, ನಿಯಮ ಪಾಲನೆಗಳೊಂದಿಗೆ ಕಾರ್ಯಕ್ರಮ ನಡೆಸಲು ಅಧಿಕಾರಿಗಳು ನಿರೀಕ್ಷಿಸಿದ್ದರು. ಕಾರ್ಯಕ್ರಮಕ್ಕೆ ಸಾಕಷ್ಟು ಸಿದ್ಧತೆಗಳನ್ನು ಆರಂಭಿಸಲಾಗಿದೆ. ಈ ನಡುವಲ್ಲೇ ಸಿಬ್ಬಂದಿಗಳಲ್ಲಿ ಕೊರೋನಾ ವೈರಸ್ ಹರಡಿರುವುದು ಆತಂಕ ಹೆಚ್ಚಾಗುವಂತೆ ಮಾಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com