ರಾಜ್ಯಸಭೆಯ 18 ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ

ಮಹಾಮಾರಿ ಕೊರೋನಾ ವೈರಸ್‍ ಲಾಕ್ ಡೌನ್ ನಿಂದಾಗಿ ಮುಂದೂಡಿಕೆಯಾಗಿದ್ದ ರಾಜ್ಯಸಭೆಯ 18 ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಿಗದಿಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಮಹಾಮಾರಿ ಕೊರೋನಾ ವೈರಸ್‍ ಲಾಕ್ ಡೌನ್ ನಿಂದಾಗಿ ಮುಂದೂಡಿಕೆಯಾಗಿದ್ದ ರಾಜ್ಯಸಭೆಯ 18 ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಿಗದಿಯಾಗಿದೆ.

ಜೂನ್ 19 ರಂದು 18 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಸೋಮವಾರ ಘೋಷಿಸಿದೆ.

ಆಂಧ್ರಪ್ರದೇಶ ಮತ್ತು ಗುಜರಾತ್ ನ ತಲಾ ನಾಲ್ಕು ಸ್ಥಾನಗಳಿಗೆ, ಜಾರ್ಖಂಡ್ ನ ಎರಡು ಸ್ಥಾನಗಳಿಗೆ, ಮಧ್ಯಪ್ರದೇಶ, ರಾಜಸ್ಥಾನದ ತಲಾ ಮೂರು ಸ್ಥಾನಗಳಿಗೆ ಮತ್ತು ಮಣಿಪುರ ಹಾಗೂ ಮೇಘಾಲಯದ ತಲಾ ಒಂದು ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದೆ. ಮತ ಎಣಿಕೆಯೂ ಅಂದು ಸಂಜೆ 5 ಗಂಟೆಗೆ ನಡೆಯಲಿದೆ ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ ಮಾರ್ಚ್‌ನಲ್ಲಿ ನಿಗದಿಯಾಗಿದ್ದ ರಾಜ್ಯಸಭೆ ಚುನಾವಣೆಯನ್ನು ದೇಶದಾದ್ಯಂತ ಜಾರಿಗೊಳಿಸಲಾಗಿದ್ದ ಸರಣಿ ಲಾಕ್‌ಡೌನ್ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿತ್ತು.

ಲಾಕ್‌ಡೌನ್ ಅವಧಿ ವಿಸ್ತರಣೆಯಾದಂತೆ ರಾಜ್ಯಸಭೆ ಚುನಾವಣೆಯೂ ಮುಂದೂಡುತ್ತಾ ಬಂದಿದ್ದು, ಇದೀಗ ಲಾಕ್‌ಡೌನ್ ಸಡಿಲಿಕೆ ಘೋಷಿಸಿರುವುದರಿಂದ ಚುನಾವಣೆ ನಡೆಸಲು ಆಯೋಗ ಸಿದ್ಧಗೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com