ದೇಶದಲ್ಲಿ ಒಂದೇ ದಿನ ದಾಖಲೆಯ 9,304 ಮಂದಿಗೆ ಕೊರೋನಾ, ಸೋಂಕಿತರ ಸಂಖ್ಯೆ 2.16 ಲಕ್ಷಕ್ಕೆ ಏರಿಕೆ

ದೇಶದಲ್ಲಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಒಂದೇ ದಿನ ದಾಖಲೆಯ 9,304 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2.16 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ದೇಶದಲ್ಲಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಒಂದೇ ದಿನ ದಾಖಲೆಯ 9,304 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2.16 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ. 

ಕಳೆದ 24 ಗಂಟೆಗಳಲ್ಲಿ ಒಟ್ಟು 9,304 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದ್ದು, ಬರೋಬ್ಬರು 260 ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,16,919ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 6,075ಕ್ಕೆ ಏರಿಕೆಯಾಗಿದೆ. 

ಸೋಂಕಿತರ ಸಂಖ್ಯೆ ಏರುತ್ತಿರುವವ ನಡುವಲ್ಲೇ ಗುಣಮುಖರಾಗುತ್ತಿರುವ ಸಂಖ್ಯೆ ಕೂಡ ಏರಿಕೆ ಕಾಣುತ್ತಿದ್ದು, ಈ ವರೆಗೂ 1,04,107 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಪ್ರಸ್ತುತ ದೇಶದಲ್ಲಿ ಇನ್ನೂ 1,06,737 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com