ಸೋನಾಲಿ ಪೋಗಟ್
ದೇಶ
ಸರ್ಕಾರಿ ಅಧಿಕಾರಿಯನ್ನು ಚಪ್ಪಲಿಯಿಂದ ಹೊಡೆದ ಟಿಕ್ ಟಾಕ್ ಸ್ಟಾರ್, ಬಿಜೆಪಿ ಮುಖಂಡೆ; ವಿಡಿಯೋ ವೈರಲ್!
ಟಿಕ್ ಟಾಕ್ ಸ್ಟಾರ್ ಮತ್ತು ಬಿಜೆಪಿ ಮುಖಂಡೆಯೊಬ್ಬರು ಮಾರುಕಟ್ಟೆ ಸಮಿತಿ ಕಾರ್ಯದರ್ಶಿಯನ್ನು ಪೊಲೀಸರ ಎದುರೆ ಚಪ್ಪಲಿಯಿಂದ ಹೊಡೆದಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹಿಸಾರ್: ಟಿಕ್ ಟಾಕ್ ಸ್ಟಾರ್ ಮತ್ತು ಬಿಜೆಪಿ ಮುಖಂಡೆಯೊಬ್ಬರು ಮಾರುಕಟ್ಟೆ ಸಮಿತಿ ಕಾರ್ಯದರ್ಶಿಯನ್ನು ಪೊಲೀಸರ ಎದುರೆ ಚಪ್ಪಲಿಯಿಂದ ಹೊಡೆದಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸೋನಾಲಿ ಫೋಗಾಟ್ ಅವರು ಹರಿಯಾಣದ ಹಿಸಾರ್ ನ ಮಾರುಕಟ್ಟೆ ಸಮಿತಿಯ ಅಧಿಕಾರಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಾರೆ. ನಂತರ ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಚಪ್ಪಲಿಯಿಂದ ಹೊಡೆದಿದ್ದಾರೆ. ಈ ಘಟನೆಯನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾರೆ.
ರೈತರ ಕೆಲವು ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಅವರು ಶುಕ್ರವಾರ ಜಿಲ್ಲಾ ಮಾರುಕಟ್ಟೆ ಸಮಿತಿಯ ಅಧಿಕಾರಿಗಳನ್ನು ಭೇಟಿ ಮಾಡಲು ಹೋಗಿದ್ದರು ಎಂದು ಬಿಜೆಪಿ ಮುಖಂಡ ಹಿಸಾರ್‌ನಲ್ಲಿ ಮಾಧ್ಯಮಗಳಿಗೆ ತಿಳಿಸಿದರು.
ಹಿಸಾರ್ ಜಿಲ್ಲೆಯ ಅಡಂಪೂರ್‌ನಿಂದ 2019ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಸೋನಾಲಿ ಫೋಗಾಟ್ ಸ್ಪರ್ಧಿಸಿ ಹಿರಿಯ ಕಾಂಗ್ರೆಸ್ ಮುಖಂಡ ಕುಲದೀಪ್ ಬಿಷ್ಣೋಯ್ ವಿರುದ್ಧ ಸೋಲು ಕಂಡಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ