ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ಕೊರೋನಾ ಚಿಕಿತ್ಸೆ ನೀಡಲು ಸಿದ್ಧವೇ: ಖಾಸಗಿ ಆಸ್ಪತ್ರೆಗಳಿಗೆ 'ಸುಪ್ರೀಂ' ಪ್ರಶ್ನೆ

ಕೊರೋನಾ ರೋಗಿಗಳಿಗೆ ನೀಡಲಾಗುವ ಚಿಕಿತ್ಸಾ ವೆಚ್ಚ ಹೆಚ್ಚಿಸುವಂತೆ ಖಾಸಗಿ ಆಸ್ಪತ್ರೆಗಳು ಸರ್ಕಾರದ ಬೆನ್ನು ಬಿದ್ದಿರುವ ಹೊತ್ತಿನಲ್ಲೇ ಸುಪ್ರೀಂ ಕೋರ್ಟ್ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ನಿಗದಿ ಮಾಡಲಾದ ದರಗಳಲ್ಲೇ ಕೊರೋನಾ ಚಿಕಿತ್ಸೆ ನೀಡಲು ನೀವು ಸಿದ್ದರಿದ್ದೀರಾ ಎಂದು ಖಾಸಗಿ ಆಸ್ಪತ್ರೆಗಳಿಗೆ ಪ್ರಶ್ನೆ ಮಾಡಿದೆ.
ಕೊರೋನಾ ಪರೀಕ್ಷೆ
ಕೊರೋನಾ ಪರೀಕ್ಷೆ

ನವದೆಹಲಿ: ಕೊರೋನಾ ರೋಗಿಗಳಿಗೆ ನೀಡಲಾಗುವ ಚಿಕಿತ್ಸಾ ವೆಚ್ಚ ಹೆಚ್ಚಿಸುವಂತೆ ಖಾಸಗಿ ಆಸ್ಪತ್ರೆಗಳು ಸರ್ಕಾರದ ಬೆನ್ನು ಬಿದ್ದಿರುವ ಹೊತ್ತಿನಲ್ಲೇ ಸುಪ್ರೀಂ ಕೋರ್ಟ್ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ನಿಗದಿ ಮಾಡಲಾದ ದರಗಳಲ್ಲೇ ಕೊರೋನಾ ಚಿಕಿತ್ಸೆ ನೀಡಲು ನೀವು ಸಿದ್ದರಿದ್ದೀರಾ ಎಂದು ಖಾಸಗಿ ಆಸ್ಪತ್ರೆಗಳಿಗೆ ಪ್ರಶ್ನೆ ಮಾಡಿದೆ.

ಈ ಸಂಬಂಧ ಶುಕ್ರವಾರ ನಡೆದ ವಿಚಾರಣೆಯಲ್ಲಿ ಸರ್ವೋಚ್ಛ ನ್ಯಾಯಾಲಯ ಇಂತಹುದೊಂದು ಪ್ರಶ್ನೆ ಕೇಳಿದ್ದು, ಬಡವರಿಗಾಗಿ ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ನಿಗದಿ ಮಾಡಲಾದ ದರಗಳಲ್ಲೇ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಸಾಧ್ಯವೇ ಎಂದು ಕೇಳಿದೆ. 

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೋಬ್ಡೆ ಅವರ ನೇತೃತ್ವ ಪೀಠ ವಿಡಿಯೋ ಕಾನ್ಫರೆನ್ಸ್ ವಿಚಾರಣೆ ಮೂಲಕ ಇಂತಹುದೊಂದು ಪ್ರಶ್ನೆ ಕೇಳಿದ್ದು, ಕೊರೋನಾ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಿ ಎಂದು ನಾವು ಕೇಳುತ್ತಿಲ್ಲ. ಆದರೆ ಬಡವರಿಗೆ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ನಿಗದಿ ಮಾಡಲಾದ ದರಗಳಲ್ಲೇ ನೀಡಲು ಸಾಧ್ಯವೇ ಎಂದು ಪೀಠ ಪ್ರಶ್ನಿಸಿದೆ. 

ಕೇಂದ್ರ ಸರ್ಕಾರ ಈಗಾಗಲೇ ಸರ್ಕಾರಿ ಆಸ್ಪತ್ರೆಗಳಿಗೆ ಕೊರೋನಾ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುತ್ತಿದೆ. ಆದರೆ ನಾವು ಖಾಸಗಿ ಆಸ್ಪತ್ರೆಗಳು ಕೊರೋನಾ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಿ ಎಂದು ನಾವು ಕೇಳುತ್ತಿಲ್ಲ. ಆದರೆ ಸರ್ಕಾರಿ ಆರೋಗ್ಯ ಯೋಜನೆಗಳಾದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿನ ರಿಯಾಯಿತಿ ದರಗಳಲ್ಲಿ ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡಲು ನೀವು ಸಿದ್ಧವಾಗಿದ್ದೀರೇನು ಎಂದು ಪ್ರಶ್ನಿಸಿದೆ. ಈ ಬಗ್ಗೆ ವಿವರ ನೀಡುವಂತೆ ಖಾಸಗಿ ಆಸ್ಪತ್ರೆಗಳಿಗೆ 2 ವಾರಗಳ ಕಾಲ ಸಮಯಾವಕಾಶ ನೀಡಿ  ವಿಚಾರಣೆಯನ್ನು 2ವಾರಗಳ ಕಾಲ ಮುಂದೂಡಿದೆ.

ಇದಕ್ಕೂ ಮೊದಲು ಸರ್ಕಾರದ ಪರ ವಾದ ಮಂಡಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಕೊರೋನಾ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಬಡವರಿಗೆ ಸರ್ಕಾರಿ ಯೋಜನೆಗಳ ಮೂಲಕ ದುಬಾರಿ ಕೊರೋನಾ ಚಿಕಿತ್ಸೆಯನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com