ಯುಪಿಎಸ್‌ಸಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ, ಅಕ್ಟೋಬರ್ 4ರಂದು ಪೂರ್ವಭಾವಿ ಪರೀಕ್ಷೆ

ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ 2020ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್‌ಸಿ) ಶುಕ್ರವಾರ ಬಿಡುಗಡೆ ಮಾಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ 2020ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್‌ಸಿ) ಶುಕ್ರವಾರ ಬಿಡುಗಡೆ ಮಾಡಿದೆ.

ಅಕ್ಟೋಬರ್ 4 ರಂದು ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ಹಾಗೂ 2021ರ ಜನವರಿ 8ರಂದು ಮುಖ್ಯ ಪರೀಕ್ಷೆ ನಡೆಯಲಿದೆ ಎಂದು ಯುಪಿಎಸ್ ಸಿ ತಿಳಿಸಿದೆ.

ಮೇ 31ರಂದು ನಡೆಯಬೇಕಿದ್ದ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯನ್ನು ಲಾಕ್ ಡೌನ್ ಹಿನ್ನೆಲೆಯಲ್ಲಿ  ಮುಂದೂಡಲಾಗಿತ್ತು.

2019ನೇ ಸಾಲಿನ ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆಯ ಭಾಗವಾಗಿರುವ ವ್ಯಕ್ತಿತ್ವ ಪರೀಕ್ಷೆ 2020ರ ಜುಲೈ 20ರಿಂದ ಮುಂದುವರಿಯಲಿದೆ. 2020ನೇ ಸಾಲಿನ ಎನ್‌ಡಿಎ ಮತ್ತು ಎನ್‌ಎ ಪರೀಕ್ಷೆಗಳು ಸೆಪ್ಟೆಂಬರ್‌ 6ರಂದು ನಿಗದಿಯಾಗಿದೆ. ಐಇಎಸ್‌/ಐಎಸ್‌ಎಸ್ 2020 ಪರೀಕ್ಷೆ ಅಕ್ಟೋಬರ್‌ 16ರಂದು ಹಾಗೂ ಎಂಜಿನಿಯರಿಂಗ್‌ ಸರ್ವೀಸಸ್‌ ಮುಖ್ಯ ಪರೀಕ್ಷೆ ಆಗಸ್ಟ್‌ 9ರಂದು ನಡೆಯಲಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com