ತೆಲಂಗಾಣ ಸಚಿವ ಕೆಟಿ ರಾಮರಾವ್ ಫಾರ್ಮ್ ಹೌಸ್ 'ಅಕ್ರಮ', ತನಿಖೆಗೆ ಎನ್ ಜಿಟಿ ಆದೇಶ

ತೆಲಂಗಾಣ ಸಚಿವ ಕೆಟಿ ರಾಮರಾವ್ ಅವರು ಅಕ್ರಮವಾಗಿ ಫಾರ್ಮ್ ಹೌಸ್ ನಿರ್ಮಿಸುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ) ಶನಿವಾರ ತನಿಖೆಗೆ ಆದೇಶಿಸಿದೆ.
ಕೆ.ಟಿ ರಾಮರಾವ್
ಕೆ.ಟಿ ರಾಮರಾವ್

ನವದೆಹಲಿ: ತೆಲಂಗಾಣ ಸಚಿವ ಕೆಟಿ ರಾಮರಾವ್ ಅವರು ಅಕ್ರಮವಾಗಿ ಫಾರ್ಮ್ ಹೌಸ್ ನಿರ್ಮಿಸುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ) ಶನಿವಾರ ತನಿಖೆಗೆ ಆದೇಶಿಸಿದೆ.

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರ ಹಾಗೂ ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರಾಮರಾವ್ ಅವರು ಪರಿಸರ ಕಾನೂನುಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಫಾರ್ಮ್ ಹೌಸ್ ಅನ್ನು ವಿಸ್ತರಿಸುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದ ಅನುಮುಲಾ ರೇವಂತ್ ರೆಡ್ಡಿ ಅವರು ಎನ್ ಜಿಟಿಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ರಾಮಕೃಷ್ಣನ್ ಮತ್ತು ಪರಿಸರ ತಜ್ಞ ಸದಸ್ಯ ಸೈಬಲ್ ದಾಸ್‌ಗುಪ್ತಾ ಅವರನ್ನೊಳಗೊಂಡ ನ್ಯಾಯಪೀಠ, ಈ ಕುರಿತು ತನಿಖೆಗೆ ಆದೇಶಿಸಿದೆ. ಅಲ್ಲದೆ ಈ ಸಂಬಂಧ ತೆಲಂಗಾಣ ಸರ್ಕಾರ, ಐಟಿ ಮತ್ತು ಕೈಗಾರಿಕಾ ಸಚಿವ ಕೆ.ಟಿ.ರಾಮರಾವ್ ಅವರಿಗೆ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಮತ್ತು ಇತರರಿಗೆ ನೋಟಿಸ್ ನೀಡಿದ್ದು, ಆಗಸ್ಟ್ 26 ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com