ದೇಶ

ಕಾಶ್ಮೀರದಲ್ಲಿ ಉಗ್ರರಿಂದ ಕಾಂಗ್ರೆಸ್ ಸರಪಂಚ್ ಗುಂಡಿಕ್ಕಿ ಹತ್ಯೆ, ಹಿಂಸೆ ಎಂದಿಗೂ ಗೆಲ್ಲಲ್ಲ: ರಾಹುಲ್ ಗಾಂಧಿ

ಕಾಶ್ಮೀರದಲ್ಲಿ ಉಗ್ರರಿಂದ ಕಾಂಗ್ರೆಸ್ ಸರಪಂಚ್ ಗುಂಡಿಕ್ಕಿ ಹತ್ಯೆ, ಹಿಂಸೆ ಎಂದಿಗೂ ಗೆಲ್ಲಲ್ಲ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
Published On :

ಅನಂತನಾಗ್(ದಕ್ಷಿಣ ಕಾಶ್ಮೀರ): ಕಾಶ್ಮೀರದಲ್ಲಿ ಉಗ್ರರು ಕಾಂಗ್ರೆಸ್ ಸರಪಂಚ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವುದಕ್ಕೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಸೋಮವಾರ ಸಂಜೆ ಉಗ್ರರು ಕೆಲಸ ನಿಮಿತ್ತ ಹೊರಹೋಗುತ್ತಿದ್ದ ಸರಪಂಚ್ ಅಜಯ್ ಪಂಡಿತ್ ಭಾರ್ತಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಇದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೆ ಅಜಯ್ ಅವರು ತಮಗೆ ಭದ್ರತೆ ನೀಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಆದರೆ ಅವರು ಬಿಜೆಪಿಗೆ ಸೇರದ ಕಾರಣ ಭದ್ರತೆಯನ್ನು ನೀಡಲಾಗಿಲ್ಲ ಎಂದು ಆರೋಪಿಸಿದೆ. 

ಇದೀಗ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಅವರು, ಅಜಯ್ ಪಂಡಿತ್ ಅವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಅಜಯ್ ಅವರು ಕಾಶ್ಮೀರದಲ್ಲಿ ಪ್ರಜಾಪ್ರಭುತ್ವ ಪ್ರಕ್ರಿಯೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ದುಃಖದ ಈ ಸಮಯದಲ್ಲಿ ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ. ಹಿಂಸೆ ಎಂದಿಗೂ ಗೆಲ್ಲುವುದಿಲ್ಲ ಎಂದು ಬರೆದಿದ್ದಾರೆ. 

ಅಜಯ್ ಪಂಡಿತ್ ಅವರು ತನ್ನ ತೋಟದಲ್ಲಿ ಕೆಲಸ ಮಾಡಲು ಹೋಗುತ್ತಿದ್ದಾಗ ಈ ಗುಂಡಿನ ದಾಳಿ ನಡೆದಿದೆ. ಆಸ್ಪತ್ರೆಗೆ ಕರೆದೊಯ್ಯುವಾಗ ಅವರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.