ದೇಶದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ 9,987 ಮಂದಿಯಲ್ಲಿ ವೈರಸ್ ಪತ್ತೆ, ಸೋಂಕಿತರ ಸಂಖ್ಯೆ 2.66 ಲಕ್ಷಕ್ಕೆ ಏರಿಕೆ

ದೇಶದಲ್ಲಿ ಕೊರೋನಾ ಸ್ಫೋಟಗೊಂಡಿದ್ದು, ಒಂದೇ ದಿನ 9,987 ಮಂದಿಯಲ್ಲಿ ವೈರಸ್ ದೃಢಪಟ್ಟಿದೆ. ಇದರೊಂದಿದೆ ದೇಶದಲ್ಲಿ ಸೋಂಕಿತರ ಸಂಖ್ಯೆ 2,66,598ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ದೇಶದಲ್ಲಿ ಕೊರೋನಾ ಸ್ಫೋಟಗೊಂಡಿದ್ದು, ಒಂದೇ ದಿನ 9,987 ಮಂದಿಯಲ್ಲಿ ವೈರಸ್ ದೃಢಪಟ್ಟಿದೆ. ಇದರೊಂದಿದೆ ದೇಶದಲ್ಲಿ ಸೋಂಕಿತರ ಸಂಖ್ಯೆ 2,66,598ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಅದರ ಬೆನ್ನಲ್ಲೇ ಕಳೆದ 24 ಗಂಟೆಗಳಲ್ಲಿ 331 ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದು, ಮೃತರ ಸಂಖ್ಯೆ ಕೂಡ 7466ಕ್ಕೆ ತಲುಪಿದೆ. 

ಈ ನಡುವೆ 266598 ಮಂದಿ ಸೋಂಕಿತರ ಪೈಕಿ 129215 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇನ್ನೂ ದೇಶದಲ್ಲಿ 129917 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ. 

ಮತ್ತೊಂದೆಡೆ ದೇಶದಲ್ಲಿಯೇ ಅತ್ಯಂತ ಹೆಚ್ಚು ಕೊರೋನಾ ಪ್ರಕರಣ ದಾಖಲಾಗಿರುವ ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ನಿನ್ನೆ ಒಂದೇ ದಿನ 1311 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಮಹಾನಗರದಲ್ಲಿ ಸೋಂಕಿತರ ಸಂಖ್ಯೆ 50085ಕ್ಕೆ ತಲುಪಿದೆ. ಜೊತೆಗೆ ಈವರೆಗೆ ನಗರದಲ್ಲಿ 1702 ಜನರು ಸಾವನ್ನಪ್ಪಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com