ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಯೋತ್ಪಾದಕರ ದಾಳಿ ವಿಫಲಗೊಳಿಸಿದ ಸೇನೆ 

ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನೆ ಭಯೋತ್ಪಾದಕರ ದಾಳಿಯನ್ನು ವಿಫಲಗೊಳಿಸಿದೆ. 
ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಯೋತ್ಪಾದಕರ ದಾಳಿ ವಿಫಲಗೊಳಿಸಿದ ಸೇನೆ
ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಯೋತ್ಪಾದಕರ ದಾಳಿ ವಿಫಲಗೊಳಿಸಿದ ಸೇನೆ
Updated on

ಶ್ರೀನಗರ: ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನೆ ಭಯೋತ್ಪಾದಕರ ದಾಳಿಯನ್ನು ವಿಫಲಗೊಳಿಸಿದೆ. 

ಸುಧಾರಿತ ಸ್ಫೋಟಕ ಸಾಧನವನ್ನು ಸಮಯಕ್ಕೆ ಸರಿಯಾಗಿ ಗುರುತಿಸಿದ ಸೇನೆ ಬಹುದೊಡ್ಡ ಅನಾಹುತವನ್ನು ತಪ್ಪಿಸಿದೆ ಎಂದು ಅಲ್ಲಿನ ಪೊಲೀಸರು ಹೇಳಿದ್ದಾರೆ. 

ಗಸ್ತು ತಿರುಗುತ್ತಿದ್ದ ಭಾರತೀಯ ಸೇನೆಯ ಯೋಧರು ಸಾಯ್ಡೋರಾ ಕ್ರಾಸಿಂಗ್ ನಲ್ಲಿ ಅಲ್ಟ್ರಾಗಳು ಇರಿಸಿದ್ದ ಸುಧಾರಿತ ಸ್ಫೋಟಕ ಸಾಧನವನ್ನು ಗುರುತಿಸಿದ್ದಾರೆ. ಸುದ್ದಿ ತಿಳಿದ ಕೂಡಲೇ ಬಾಂಬ್ ನಿಷ್ಕ್ರಿಯ ದಳದವರು ಧಾವಿಸಿ, ಐಇಡಿಯನ್ನು ನಿಷ್ಕ್ರಿಯಗೊಳಿಸಿದ್ದಾರೆ. ನಿಯಂತ್ರಿತ ಸ್ಫೋಟದಿಂದಾಗಿ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com