ದೇಶ

ಕೊರೋನಾ ವೈರಸ್: ಮುಂಬೈನಲ್ಲಿ ಇಂದು 1567 ಹೊಸ ಪಾಸಿಟಿವ್ ಪ್ರಕರಣ ದಾಖಲು

ಕೊರೋನಾ ವೈರಸ್: ಮುಂಬೈನಲ್ಲಿ ಇಂದು 1567 ಹೊಸ ಪಾಸಿಟಿವ್ ಪ್ರಕರಣ ದಾಖಲು
ಸಂಗ್ರಹ ಚಿತ್ರ
Published On :

ಮುಂಬೈ: ಮಾರಕ ಕೊರೋನಾ ವೈರಸ್ ಗೆ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿ ಹೋಗಿದ್ದು, ಇಂದು ಮುಂಬೈನಲ್ಲಿ 1567 ಹೊಸ ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಹೌದು.. ಮುಂಬೈನಲ್ಲಿ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು ಇಂದು ಮುಂಬೈನಲ್ಲಿ 1567 ಹೊಸ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಆ ಮೂಲಕ ಮುಂಬೈನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 52445ಕ್ಕೆ ಏರಿಕೆಯಾಗಿದೆ.

ನಿನ್ನೆಯಷ್ಚೇ ಮುಂಬೈ ಸೋಂಕಿತರ ಸಂಖ್ಯೆಯಲ್ಲಿ ಕೊರೋನಾ ವೈರಸ್ ತವರು ವುಹಾನ್ ನನ್ನು ಹಿಂದಿಕ್ಕಿತ್ತು. ವುಹಾನ್ ನಲ್ಲಿ ಸೋಂಕಿತರ ಸಂಖ್ಯೆ 50,333ರಷ್ಟಿತ್ತು. ಅಲ್ಲದೆ 3,869 ಮಂದಿ ಸಾವನ್ನಪ್ಪಿದ್ದರು. 

ಇನ್ನು ಇಂದೂ ಕೂಡ ಮುಂಬೈನಲ್ಲಿ 97 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಮುಂಬೈನಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 1855 ಕ್ಕೆ ಏರಿಕೆಯಾಗಿದೆ. ಮುಂಬೈನಲ್ಲಿ 23693 ಸೋಂಕಿತರು ಗುಣುಮುಖರಾಗಿದ್ದು, 26897 ಸಕ್ರಿಯ ಪ್ರಕರಣಗಳಿವೆ ಎಂದು ಬಿಎಂಸಿ ಮಾಹಿತಿ ನೀಡಿದೆ. 

ಮಹಾರಾಷ್ಟ್ರದಲ್ಲಿ ಸೋಂಕಿತರು ಸಂಖ್ಯೆ 94,041ಕ್ಕೆ ಏರಿಕೆ
ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಾದ್ಯತ 3254 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 94,041ಕ್ಕೆ ಏರಿಕೆಯಾಗಿದೆ.  ಮಹಾರಾಷ್ಟ್ರದಲ್ಲಿ ಒಟ್ಟು ಇಂದು 149 ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 3438ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ 1879 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಈ ವರೆಗೂ 44,517 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. 49,524 ಸಕ್ರಿಯ ಪ್ರಕರಣಗಳಿವೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.