ಲಷ್ಕರ್ ಎ ತೊಯ್ಬಾ ಜಾಲ ಪತ್ತೆ: 100 ಕೋಟಿ ಮೌಲ್ಯದ ಅಫೀಮು, 1.34 ಕೋಟಿ ಕರೆನ್ಸಿ ವಶ!

ಉತ್ತರ ಕಾಶ್ಮೀರದ ಗಡಿ ಜಿಲ್ಲೆಯಾದ ಕುಪ್ವಾರಾದಲ್ಲಿ ಭದ್ರತಾ ಪಡೆಗಳು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಜಾಲವನ್ನು ಪತ್ತೆ ಮಾಡಿ, ಅವರಿಂದ ಅಫೀಮು ಮತ್ತು ಭಾರತೀಯ ಕರೆನ್ಸಿಯನ್ನು ವಶಪಡಿಸಿಕೊಂಡಿವೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.
ಬಂಧಿತ ಆರೋಪಿಗಳು
ಬಂಧಿತ ಆರೋಪಿಗಳು
Updated on: 

ಶ್ರೀನಗರ: ಉತ್ತರ ಕಾಶ್ಮೀರದ ಗಡಿ ಜಿಲ್ಲೆಯಾದ ಕುಪ್ವಾರಾದಲ್ಲಿ ಭದ್ರತಾ ಪಡೆಗಳು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಜಾಲವನ್ನು ಪತ್ತೆ ಮಾಡಿ, ಅವರಿಂದ ಅಫೀಮು ಮತ್ತು ಭಾರತೀಯ ಕರೆನ್ಸಿಯನ್ನು ವಶಪಡಿಸಿಕೊಂಡಿವೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.

ಭಾರತೀಯ ಸೇನೆ, ಜಮ್ಮು-ಕಾಶ್ಮೀರ ಪೊಲೀಸ್ ನ ವಿಶೇಷ ತಂಡ ಮತ್ತು ಸಿಆರ್‌ಪಿಎಫ್ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿ ಕಣಿವೆಯಲ್ಲಿ ಮಾದಕ ವಸ್ತು ಪೂರೈಕೆ ಮತ್ತು ಹಿಂಸಾಚಾರಗಳಲ್ಲಿ ಭಾಗಿಯಾಗಿದ್ದ ಮೂವರು ಎಲ್‌ಇಟಿ ಉಗ್ರರನ್ನು ಬಂಧಿಸಿವೆ ಎಂದು ಅವರು ತಿಳಿಸಿದ್ದಾರೆ.

ಲಷ್ಕರ್‍ ಜಾಲದ ಸದಸ್ಯರು ಪಾಕಿಸ್ತಾನದಲ್ಲಿರುವ ಸಂಘಟನೆಯ ಹಿರಿಯ ಉಗ್ರರೊಂದಿಗೆ ಸಂಪರ್ಕದಲ್ಲಿದ್ದರು. ಈ ಕುರಿತಂತೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com