ಮಹಾರಾಷ್ಟ್ರದಲ್ಲಿ 1 ಲಕ್ಷಕ್ಕೇರಿದ ಕೊರೋನಾ ಸೋಂಕಿತರ ಸಂಖ್ಯೆ, ಮುಂಬೈವೊಂದರಲ್ಲೇ 55,451 ಸೋಂಕಿತರು!

ಮುಂಬೈ: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದ ಅತೀ ಹೆಚ್ಚು ಪ್ರಮಾಣದಲ್ಲಿ ತತ್ತರಿಸಿ ಹೋಗಿರುವ ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 1 ಲಕ್ಷಕ್ಕೇರಿದೆ.
ಇಂದೂ ಕೂಡ ಮಹಾರಾಷ್ಟ್ರದಲ್ಲಿ 3,717 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಒಂದು ಲಕ್ಷಕ್ಕೇರಿದೆ. ಅಂತೆಯೇ ಇಂದೂ ಕೂಡ ಮಹಾರಾಷ್ಟ್ರದಲ್ಲಿ 127 ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ಮಹಾರಾಷ್ಟ್ರದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 3,717ಕ್ಕೆ ಏರಿಕೆಯಾಗಿದೆ.
ಶುಕ್ರವಾರ ಒಂದೇ ದಿನ ಮಹಾರಾಷ್ಟ್ರದಲ್ಲಿ 1,718 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ರಾಜ್ಯದಲ್ಲಿ ಗುಣಮುಖರಾದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಸಂಖ್ಯೆ 47,796ಕ್ಕೆ ಏರಿಕೆಯಾಗಿದೆ. 49,616 ಸಕ್ರಿಯ ಪ್ರಕರಣಗಳಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಮಹಾರಾಷ್ಟ್ರದಲ್ಲಿ ಸೋಂಕಿತರ ಚೇತರಿಕೆ ಪ್ರಮಾಣ ಶೇ.47.3 ರಷ್ಟಿದ್ದು, ಮರಣ ಪ್ರಮಾಣ ಶೇ.3.7ರಷ್ಟಿದೆ. ರಾಜ್ಯದಲ್ಲಿ ಸುಮಾರು 75,067 ಪ್ರತ್ಯೇಕಿತ ಬೆಡ್ ಗಳಿದ್ದು, 1,553 ಸಾಂಸ್ಥಿಕ ಕ್ವಾರಂಟೈನ್ ಸೇವೆ ಲಭ್ಯವಿದೆ. ಈ ಪೈಕಿ 28,200 ಮಂದಿ ಕ್ವಾರಂಟೈನ್ ನಲ್ಲಿದ್ದು, 5,79,569 ಮಂದಿ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


