
ನವದೆಹಲಿ: ಮಹಾರಾಷ್ಟ್ರದ ಮಹಾ ವಿಕಾಸ್ ಅಗಡಿ ಸರ್ಕಾರದ ಸಾಮಾಜಿಕ ನ್ಯಾಯ ಸಚಿವ ಧನಂಜಯ್ ಮುಂಡಗೆ ಕೊರೋನಾ ಪಾಸಿಟಿವ್ ಬಂದಿರುವುದು ಧೃಡವಾಗಿದೆ.
ಮುಂಡೆ ಅವರಿಗೆ ಕೊರೋನಾದ ಯಾವುದೇ ರೋಗ ಲಕ್ಷಣಗಳಿರಲಿಲ್ಲ, ಅವರ ಬಳಿ ಕೆಲಸ ಮಾಡುತ್ತಿದ್ದ ಐವರು ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಇತ್ತು, ಮುಂಡೆ ಸೇರಿದಂತೆ ಇವರಾರಿಗೂ ರೋಗ ಲಕ್ಷಣಗಳಿರಲಿಲ್ಲ.
ಧನಂಜಯ ಮುಂಡೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಬುಧವಾರ ರಾಜ್ಯ ಸಂಪುಟ ಸಭೆಯಲ್ಲಿ ಮತ್ತು ಪ್ರಯೋಗಾಲಯು ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಈ ಮೊದಲು ಲೋಕೋಪಯೋಗಿ ಸಚಿವ ಅಶೋಕ್ ಚವಾಣ್ ಮತ್ತು ವಸತಿ ಸಚಿವ ಜಿತೇಂದ್ರ ಅಹವಾಡ್ ಕೂಡ ಕೊರೋನಾ ಸೋಂಕಿತರಾಗಿದ್ದರು.
Advertisement