ಚೆನ್ನೈನಲ್ಲಿ ಸಂಪೂರ್ಣ ಲಾಕ್ ಡೌನ್ ಇಲ್ಲ: ವದಂತಿ ತಳ್ಳಿಹಾಕಿದ ತಮಿಳುನಾಡು ಸರ್ಕಾರ

ಚೆನ್ನೈ ನಗರವನ್ನು ಸಂಪೂರ್ಣ ಲಾಕ್ ಡೌನ್ ಮಾಡುವ ಯಾವುದೇ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ತಮಿಳುನಾಡು ಸರ್ಕಾರ ವಾಟ್ಸ್ ಆ್ಯಪ್ ವದಂತಿಗೆ ಶುಕ್ರವಾರ ತೆರೆ ಎಳೆದಿದೆ.
ಪಳನಿಸ್ವಾಮಿ
ಪಳನಿಸ್ವಾಮಿ

ಚೆನ್ನೈ: ಚೆನ್ನೈ ನಗರವನ್ನು ಸಂಪೂರ್ಣ ಲಾಕ್ ಡೌನ್ ಮಾಡುವ ಯಾವುದೇ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ತಮಿಳುನಾಡು ಸರ್ಕಾರ ವಾಟ್ಸ್ ಆ್ಯಪ್ ವದಂತಿಗೆ ಶುಕ್ರವಾರ ತೆರೆ ಎಳೆದಿದೆ.

ಚೆನ್ನೈ ನಗರದಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಹಾಮಾರಿಯನ್ನು ನಿಯಂತ್ರಿಸಲು ಸಂಪೂರ್ಣ ಲಾಕ್ ಡೌನ್ ಏಕೆ ಮಾಡಬಾರದು? ಎಂದು ಮದ್ರಾಸ್ ಹೈಕೋರ್ಟ್ ನಿನ್ನೆ ತಮಿಳುನಾಡು ಸರ್ಕಾರವನ್ನು ಪ್ರಶ್ನಿಸಿತ್ತು. ಈ ಹಿನ್ನೆಲೆಯಲ್ಲಿ ನಗರವನ್ನು ಮತ್ತೆ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ ಎಂಬ ಸಂದೇಶಗಳು ವಾಟ್ಸ್ ಆ್ಯಪ್ ನಲ್ಲಿ ಹರಿದಾಡುತ್ತಿದ್ದವು.

ಇಂದು ಸೇಲಂನಲ್ಲಿ ಚೆನ್ನೈ ಲಾಕ್ ಡೌನ್ ಮಾಡುವ ವದಂತಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ ತಮಿಳುನಾಡು ಮುಖ್ಯಮಂತ್ರಿ ಇಕೆ ಪಳನಿಸ್ವಾಮಿ ಅವರು, ಅಂತಹ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದಿದ್ದಾರೆ.

ಇದೇ ವೇಳೆ ವದಂತಿ ಹಬ್ಬಿಸುತ್ತಿರುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಸಿಎಂ ಎಚ್ಚರಿಕೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com