ಕೋವಿಡ್-19 ಸೋಂಕು ಹರಡುವಿಕೆ ತಡೆಯುವಲ್ಲಿ ಲಾಕ್ ಡೌನ್ ವಿಫಲ: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ

ಕೊರೋನಾವೈರಸ್ ಪ್ರಕರಣ ಹೆಚ್ಚಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಲಾಕ್ ಡೌನ್ ನಿಂದ ಯಾವುದೇ ಪ್ರಯೋಜನವಾಗಿಲ್ಲ, ನಿರ್ಭಂದದಿಂದ ಸೋಂಕು ಹರಡುವಿಕೆ ನಿಂತಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ವಾಗ್ದಾಳಿ ನಡೆಸಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on: 

ನವದೆಹಲಿ: ಕೊರೋನಾವೈರಸ್ ಪ್ರಕರಣ ಹೆಚ್ಚಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಲಾಕ್ ಡೌನ್ ನಿಂದ ಯಾವುದೇ ಪ್ರಯೋಜನವಾಗಿಲ್ಲ, ನಿರ್ಭಂದದಿಂದ ಸೋಂಕು ಹರಡುವಿಕೆ ನಿಂತಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ವಾಗ್ದಾಳಿ ನಡೆಸಿದ್ದಾರೆ.

ದೇಶಾದ್ಯಂತ ನಾಲ್ಕು ಹಂತಗಳಲ್ಲಿ ಜಾರಿಗೊಳಿಸಲಾಗಿದ್ದ ಲಾಕ್ ಡೌನ್ ಸಂದರ್ಭದಲ್ಲಿ ಕೋವಿಡ್ -19 ಪ್ರಕರಣ ಹೆಚ್ಚಾಗಿರುವ ಬಗ್ಗೆ ರಾಹುಲ್ ಗಾಂಧಿ ನಕ್ಷೆಯೊಂದನ್ನು ಬಳಸಿ ವಿವರಿಸಿದ್ದಾರೆ. ಹುಂಭತನ ಒಂದೇ ಕೆಲಸವನ್ನು ಮತ್ತೆ ಮತ್ತೆ ಮಾಡಿಸುತ್ತಿದ್ದು, ವಿಭಿನ್ನ ಫಲಿತಾಂಶಗಳನ್ನು ನಿರೀಕ್ಷಿಸುತ್ತಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ನಿನ್ನೆ ಒಂದೇ ದಿನ 386 ಸಾವಿನೊಂದಿಗೆ 11, 455 ಹೊಸ ಪ್ರಕರಣಗಳೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 308, 993ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 8, 884 ಆದ ಬೆನ್ನಲ್ಲೇ ರಾಹುಲ್ ಗಾಂಧಿ ಈ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ. 

ಕೋವಿಡ್-19 ತಡೆಗಟ್ಟುವಲ್ಲಿ ಸರ್ಕಾರದ ಪ್ರಯತ್ನಗಳನ್ನು ಶುಕ್ರವಾರ ಟೀಕಿಸಿದ್ದ ರಾಹುಲ್ ಗಾಂಧಿ, ಕೋವಿಡ್-19 ಕೇಸ್ ಗಳು ದೇಶದಲ್ಲಿ ಹೆಚ್ಚಾಗುತ್ತಿರುವ ಬಗ್ಗೆ ನಕ್ಷೆಯ ಮೂಲಕ ತೋರಿಸಿದ್ದರು. ಕೊರೋನಾವೈರಸ್ ನಿರ್ವಹಣೆಯಲ್ಲಿ ಕೇಂದ್ರಸರ್ಕಾರದ ಪಾತ್ರವನ್ನು ರಾಹುಲ್ ಗಾಂಧಿ ಪ್ರಶ್ನಿಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com