ದೆಹಲಿಯಲ್ಲಿ ಕೊರೋನಾ ಪರಿಸ್ಥಿತಿ ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ಕರೆದ ಅಮಿತ್ ಶಾ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಷ್ಟ್ರ ರಾಜಧಾನಿಯಲ್ಲಿ ಕೊವಿಡ್-19 ಪರಿಸ್ಥಿತಿ ಕುರಿತು ಚರ್ಚಿಸಲು ಸೋಮವಾರ ಸರ್ವಪಕ್ಷಗಳ ಸಭೆ ಕರೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಮಿತ್ ಶಾ
ಅಮಿತ್ ಶಾ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಷ್ಟ್ರ ರಾಜಧಾನಿಯಲ್ಲಿ ಕೊವಿಡ್-19 ಪರಿಸ್ಥಿತಿ ಕುರಿತು ಚರ್ಚಿಸಲು ಸೋಮವಾರ ಸರ್ವಪಕ್ಷಗಳ ಸಭೆ ಕರೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಭೆಗೆ ಬಿಜೆಪಿ, ಕಾಂಗ್ರೆಸ್, ಎಎಪಿ ಮತ್ತು ಬಿಎಸ್ ಪಿ ಪಕ್ಷಗಳ ಮುಖಂಡರಿಗೆ ಆಹ್ವಾನ ನೀಡಲಾಗಿದೆ.

ದೆಹಲಿಯಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಸೋಂಕಿತರ ಸಂಖ್ಯೆ 39 ಸಾವಿರಕ್ಕೆ ಏರಿಕೆಯಾಗಿದೆ. ಇನ್ನು ಕೊರೋನಾ ವೈರಸ್ 1200 ಮಂದಿ ಬಲಿಯಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ,  ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅಮಿತ್ ಶಾ, ಸೋಂಕಿತರ ಚಿಕಿತ್ಸೆಗಾಗಿ ದೆಹಲಿಗೆ 500 ರೈಲ್ವೆ ಬೋಗಿಗಳನ್ನು ನೀಡುವುದಾಗಿ ಹೇಳಿದ್ದಾರೆ.

ಕೊವಿಡ್ ಸೋಂಕು ಇಡೀ ದೇಶದಲ್ಲೇ ಹೆಚ್ಚಾಗುತ್ತಿರುವ ಸಮಯದಲ್ಲಿ ಕರೋನಾ ವೈರಸ್ ಹರಡುವುದನ್ನು ತಡೆಯಲು ಪರಸ್ಪರ ಸಮನ್ವಯದಿಂದ ಕೆಲಸ ಮಾಡುವಂತೆ ದೆಹಲಿ ಸರ್ಕಾರ ಮತ್ತು ಅಲ್ಲಿನ ಮೂರು ನಗರಪಾಲಿಕೆಗಳಿಗೆ ಅಮಿತ್ ಶಾ ಸೂಚಿಸಿದ್ದಾರೆ.

ಕರೋನಾ ವಿರುದ್ಧದ ಹೋರಾಟವನ್ನು ಪರಸ್ಪರ ಸಮನ್ವಯದಿಂದ ಗೆಲ್ಲುವುದು ಈ ಸಭೆಯ ಮುಖ್ಯ ಉದ್ದೇಶವಾಗಿದೆ ಎಂದು ಅಮಿತ್‍ ಶಾ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com