ದೇಶ

ಯುಪಿ ಮಾಜಿ ಸಿಎಂ ಅಖಿಲೇಶ್ ಸಂಬಂಧಿ ಧರ್ಮೇಂದ್ರ ಯಾದವ್ ಗೆ ಕೊರೋನಾ ಸೋಂಕು!

ಯುಪಿ ಮಾಜಿ ಸಿಎಂ ಅಖಿಲೇಶ್ ಸಂಬಂಧಿ ಧರ್ಮೇಂದ್ರ ಯಾದವ್ ಗೆ ಕೊರೋನಾ ಸೋಂಕು!
ಧರ್ಮೇಂದ್ರ ಯಾದವ್
Published On :

ಲಖನೌ: ಸಮಾಜವಾದಿ ಪಕ್ಷದ ಮಾಜಿ ಸಂಸದ, ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್ ಸಮೀಪದ ಸಂಬಂಧಿಯೂ ಆದ ಧರ್ಮೇಂದ್ರ ಯಾದವ್ ಅವರಿಗೆ ಕೊರೋನಾವೈರಸ್ ಸೋಂಕು ದೃಢಪಟ್ಟಿದೆ. . ಶನಿವಾರ ರಾತ್ರಿ ಸೋಂಕು ದೃಢವಾಗಿದ್ದು ಯಾದವ್ ಅವರನ್ನು ಇಟವಾದಲ್ಲಿನ ಸೆಫೈ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸಂಸದ ಧರ್ಮೇಂದ್ರ ಯಾದವ್ ಜ್ವರದಿಂದ ಬಳಲುತ್ತಿದ್ದರು, ಇದೀಗ ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ ಎಂದು ವಕ್ತಾರರು ಹೇಳಿದ್ದಾರೆ. 

ಮಾಜಿ ಸಂಸದರೊಂದಿಗೆ ಸಂಪರ್ಕಕ್ಕೆ ಬಂದವರನ್ನು ಹುಡುಕಬೇಕಿದ್ದು ಜಿಲ್ಲೆಯ ಆರೋಗ್ಯ ಇಲಾಖೆ ಅಧಿಕಾರಿಗಳು ಈಗ ಸಂಪರ್ಕ ಪತ್ತೆಹಚ್ಚುತ್ತಿದ್ದಾರೆ. ಯಾದವ್ 16 ನೇ ಲೋಕಸಭೆಯಲ್ಲಿ ಉತ್ತರ ಪ್ರದೇಶದ ಬಾದೌನ್ ಕ್ಷೇತ್ರದಿಂದ ಸಂಸತ್ ಸದಸ್ಯರಾಗಿದ್ದರು. ಇದಕ್ಕೂ ಮುನ್ನ ಸಹ ಎರಡು ಬಾರಿಗೆ ಅವರು ಸಂಸತ್ ಸದಸ್ಯರಾಗಿದ್ದರು.

ಏತನ್ಮಧ್ಯೆ, ಉತ್ತರ ಪ್ರದೇಶದಲ್ಲಿ ಶುಕ್ರವಾರ ಕರೋನವೈರಸ್ ಪ್ರಕರಣಗಳು 13,118 ಕ್ಕೆ ತಲುಪಿದೆ. ಪ್ರಸ್ತುತ, ರಾಜ್ಯದಲ್ಲಿ 4,858 ಸಕ್ರಿಯ ಕೋವಿಡ್  -19 ಪ್ರಕರಣಗಳಿದ್ದು, 7,875 ಜನರು ಈಗಾಗಲೇ ಮಾರಣಾಂತಿಕ ವೈರಸ್‌ನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಇದುವರೆಗೆ 385 ಮೃತಪಟ್ಟಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.