ಲಾಲ್ ಜಿ ಟಂಡನ್
ದೇಶ
ಮಧ್ಯ ಪ್ರದೇಶ ರಾಜ್ಯಪಾಲ ಲಾಲ್ ಜಿ ಟಂಡನ್ ಸ್ಥಿತಿ ಗಂಭೀರ, ವೆಂಟಿಲೇಟರ್ ಅಳವಡಿಕೆ
ಮಧ್ಯ ಪ್ರದೇಶ ರಾಜ್ಯಪಾಲ ಲಾಲ್ ಜಿ ಟಂಡನ್ ಅವರು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಮತ್ತು ವೆಂಟಿಲೇಟರ್ ಅಳವಡಿಸಲಾಗಿದೆ ಎಂದು ಸೋಮವಾರ ವೈದ್ಯರು ತಿಳಿಸಿದ್ದಾರೆ.
ಲಖನೌ: ಮಧ್ಯ ಪ್ರದೇಶ ರಾಜ್ಯಪಾಲ ಲಾಲ್ ಜಿ ಟಂಡನ್ ಅವರು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಮತ್ತು ವೆಂಟಿಲೇಟರ್ ಅಳವಡಿಸಲಾಗಿದೆ ಎಂದು ಸೋಮವಾರ ವೈದ್ಯರು ತಿಳಿಸಿದ್ದಾರೆ.
ಲಾಲ್ ಜಿ ಟಂಡನ್ ಅವರು ಯಕೃತ್ತಿನ ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು, ನಂತರ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತು. ಈಗ ಅವರನ್ನು ವೆಂಟಿಲೇಟರ್ ನಲ್ಲಿಡಲಾಗಿದೆ ಎಂದು ಮೆದಾಂತ್ ಆಸ್ಪತ್ರೆಯ ನಿರ್ದೇಶಕ ಪ್ರೊ. ರಾಕೇಶ್ ಕಪೂರ್ ಅವರು ಹೇಳಿದ್ದಾರೆ.
ಜ್ವರ ಮತ್ತು ಮೂತ್ರದ ಸಮಸ್ಯೆಯಿಂದ ಬಳಲುತ್ತಿದ್ದ ಲಾಲ್ ಜಿ ಟಂಡನ್ ಅವರನ್ನು ಶನಿವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು.

