
ನವದೆಹಲಿ: ಮಾರಕ ಕೊರೋನಾ ವೈರಸ್ ಆರ್ಭಟ ಜೋರಾಗಿರುವಂತೆಯೇ ಭಾರತದಲ್ಲಿ ಸಮಾಧಾನಕರ ಸಂಗತಿಯೊಂದನ್ನು ಕೇಂದ್ರ ಆರೋಗ್ಯ ಇಲಾಖೆ ಹೊರ ಹಾಕಿದೆ.
ಹೌದು... ಭಾರತದಲ್ಲಿ ಮಾರಕ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿರುವಂತೆಯೇ ಕೇಂದ್ರ ಆರೋಗ್ಯ ಇಲಾಖೆ ಇಂದು ಸಮಾಧಾನಕರ ಸಂಗತಿಯೊಂದನ್ನು ಹೊರ ಹಾಕಿದೆ. ಅದರಂತೆ ಭಾರತದಲ್ಲಿ ಪ್ರಸ್ತುತ ಸೋಂಕಿತರ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿದೆ.
ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯಂತೆ ಭಾರತದಲ್ಲಿ ಕೊರೋನ ಸೋಂಕಿತರ ಚೇತರಿಕೆ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡುಬಂದಿದ್ದು, ಪ್ರಸ್ತುತ ಭಾರತದಲ್ಲಿರುವ ಒಟ್ಟಾರೆ ಸೋಂಕಿತರ ಪೈಕಿ ಶೇ.52.47ರಷ್ಟು ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಹೇಳಲಾಗಿದೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 10,215 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ 1,80,012 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 10,667 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಪ್ರಸ್ತುತ ಭಾರತದಲ್ಲಿ 343091 ಸೋಂಕಿತರಿದ್ದು, ಈ ಪೈಕಿ ಅರ್ಧಕ್ಕಿಂತ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ.
ಚೇತರಿಕೆ ಪ್ರಕರಣ ಸಕ್ರಿಯ ಪ್ರಮಾಣಕ್ಕಿಂತ ನಿರಂತರ ಏಳು ದಿನಗಳಿಂದ ಹೆಚ್ಚಾಗಿರುವುದು ಸಮಾಧಾನಕರ ಸಂಗತಿಯಾಗಿದೆ. ಏಳು ದಿನಗಳ ಹಿಂದೆ ಸಕ್ರಿಯ ಮತ್ತುಚೇತರಿಕೆ ಪ್ರಮಾಣ ಸರಿಸಮನವಾಗಿತ್ತು. ಅಕ್ಟಿವ್ ಕೇಸ್‍ಗಳಿಗಿಂತ ರಿಕವರಿರೇಟ್‍ನಲ್ಲಿ ವೃದ್ದಿ ಕಂಡುಬಂದುಅದುಒಂದು ವಾರದಿಂದಮುಂದುವರಿದಿರುವುದುಜನರಲ್ಲಿ ನಿರಾಳತೆಯ ಭಾವ ಮೂಡಿಸಿದೆ.
Advertisement