ಅಯೋಧ್ಯೆ ರಾಮಮಂದಿರ ನಿರ್ಮಾಣ: ಜುಲೈ 1ರಂದು ಸಿಎಂ ಯೋಗಿ ಆದಿತ್ಯನಾಥ್ ಭೂಮಿ ಪೂಜೆ ಸಾಧ್ಯತೆ!

ಬಹು ನಿರೀಕ್ಷಿತ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಸಮಯ ಕೂಡಿ ಬಂದಿದ್ದು, ಇದೇ ಜುಲೈ 1ರಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಭೂಮಿ ಪೂಜೆ ನೆರವೇರಿಸುವ ಸಾಧ್ಯತೆ ಇದೆ.
ಯೋಗಿಗೆ ಅಯೋಧ್ಯೆ ಟ್ರಸ್ಟ್ ಸಾರಥ್ಯ: ಮಹಾಂತ ಗೋಪಾಲ ದಾಸ್ ಆಗ್ರಹ
ಯೋಗಿಗೆ ಅಯೋಧ್ಯೆ ಟ್ರಸ್ಟ್ ಸಾರಥ್ಯ: ಮಹಾಂತ ಗೋಪಾಲ ದಾಸ್ ಆಗ್ರಹ

ಲಖನೌ: ಬಹು ನಿರೀಕ್ಷಿತ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಸಮಯ ಕೂಡಿ ಬಂದಿದ್ದು, ಇದೇ ಜುಲೈ 1ರಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಭೂಮಿ ಪೂಜೆ ನೆರವೇರಿಸುವ ಸಾಧ್ಯತೆ ಇದೆ.

ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ಮುಂದೂಡಲ್ಪಟ್ಟಿದ್ದ ರಾಮಮಂದಿರ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ಕೆ ಅಂತಿಮವಾಗಿ ಮಹೂರ್ತ ಕೂಡಿ ಬಂದಿದ್ದು, ಮುಂಬರುವ ಜುಲೈ 1ರಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಅವರು ಭೂಮಿ ಪೂಜೆ ನೆರವೇರಿಸುವ  ಸಾಧ್ಯತೆ ಇದೆ. ಈಗಾಗಲೇ ಈ ಸಂಬಂಧ ಸಿದ್ಧತಾ ಕಾರ್ಯಗಳು ಆರಂಭವಾಗಿದ್ದು, ಸುಮಾರು 70 ಎಕರೆ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಕಲ ಸಿದ್ಧತೆಗಳೂ ನಡೆಯುತ್ತಿವೆ. 

ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನೇತೃತ್ವದಲ್ಲಿ ರಾಮಮಂದಿರ ದೇಗುಲದ ನಿರ್ಮಾಣ ಕಾರ್ಯಕ್ಕೆ ಸಿದ್ಧತೆ ನಡೆ,ಲಾಗಿದೆ. ಈ ಹಿಂದೆ ಫೆಬ್ರವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದ ಟ್ರಸ್ಟ್ ಸದಸ್ಯರು ಭೂಮಿ ಪೂಜೆಗೆ ಆಹ್ವಾನ ನೀಡಿದ್ದರು. ಪ್ರಧಾನಿ ಮೋದಿ ಕೂಡ ಆಹ್ವಾನ ಸ್ವೀಕರಿಸಿದ್ದರು. ಆದರೆ ಬಳಿಕ ಕೊರೋನಾ ವೈರಸ್ ಲೌಕ್ ಡೌನ್ ಆರಂಭವಾಗಿತ್ತು. ಇದೀಗ ಜುಲೈ 1ರ ದೇವ್ಶಯಾನಿ ಏಕಾದಶಿರಂದು ಭೂಮಿ ಪೂಜೆ ನೆರವೇರಿಸಲಾಗುತ್ತದೆ.

ಜೂನ್ 18 ರಂದು ಅಯೋಧ್ಯೆಗೆ ಯೋಗಿ ಆದಿತ್ಯನಾಥ್ ಭೇಟಿ, ಸಿದ್ಧತಾ ಕಾರ್ಯಗಳ ಪರಿಶೀಲನೆ
ಇನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜೂನ್ 18 ರಂದು ಅಯೋಧ್ಯೆಗೆ ಭೇಟಿ ನೀಡಿ, ರಾಮ ಮಂದಿರ ನಿರ್ಮಾಣದ ‘ಭೂಮಿ ಪೂಜೆ’ ಸಿದ್ಧತೆಗಳನ್ನು ಪರಿಶೀಲಿಸಲಿದ್ದಾರೆ. ಲಾಕ್​ಡೌನ್​ ಸಡಿಲಿಕೆ ಬೆನ್ನಲ್ಲೆ ಅಯೋಧ್ಯೆಯಲ್ಲಿ ರಾಮ ಮಂದಿರದ ಕಾರ್ಯ ಭರದಿಂದ ಸಾಗುತ್ತಿದ್ದು ಭೂಮಿ ಪೂಜೆಗೆ ಸಿದ್ಧತೆ ನಡೆಸಲಾಗುತ್ತಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಕಾರ್ಯಾಲಯ, ಸಿಎಂ ಯೋಗಿ ಆದಿತ್ಯನಾಥ್ ಜೂನ್ 18 ರಂದು ಅಯೋಧ್ಯೆಗೆ ಭೇಟಿ ನೀಡಲಿದ್ದು, ಭೂಮಿ ಪೂಜೆ ಸಿದ್ಧತೆಗಳನ್ನು ಪರಿಶೀಲನೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು, 'ಭೂಮಿ ಪೂಜೆಗೆ ಹಾಜರಾಗಲು ಪ್ರಧಾನಿ ನರೇಂದ್ರ ಮೋದಿಯವರಿಗೆ ಆಹ್ವಾನವನ್ನು ನೀಡಿದ್ದೇವೆ. ಆದರೆ ಕೋವಿಡ್-19 ಬಿಕ್ಕಟ್ಟಿನಿಂದ ಪ್ರಧಾನಿ ಮೋದಿ ಭಾಗವಹಿಸಲು ಸಾಧ್ಯವಾಗದಿರಬಹುದು. ವಿಡಿಯೋ ಕಾನ್ಫರೆನ್ಸ್​ ಮೂಲಕ ಹಾಜರಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಅಭಿವೃದ್ಧಿ ಕಾರ್ಯಗಳ ಪ್ರಗತಿ ಮತ್ತು ಅಯೋಧ್ಯೆಯಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆಯೂ ಮುಖ್ಯಮಂತ್ರಿಗಳು ಪರಿಶೀಲನೆ ನಡೆಸಲಿದ್ದಾರೆ. ದೇವಾಲಯ ಸ್ಥಳದ ನೆಲ ಸಮಗೊಳಿಸುವಿಕೆ ಕಾರ್ಯ ಭರದಿಂದ ಸಾಗುತ್ತಿದ್ದು, ಸ್ಥಳದಲ್ಲಿ ಮಣ್ಣಿನ ಪರೀಕ್ಷೆಯನ್ನು ಮಾಡಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com