ಚೆನ್ನೈನಲ್ಲಿ ಮತ್ತೆ ಲಾಖ್ ಡೌನ್: ಕೆಲವು ವಿನಾಯಿತಿ ನೀಡಿದ ತಮಿಳುನಾಡು ಸರ್ಕಾರ

ಚೆನ್ನೈನಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ರಾಜಧಾನಿಯಲ್ಲಿ ಶುಕ್ರವಾರದಿಂದ ಮತ್ತೆ ಸಂಪೂರ್ಣ ಲಾಕ್ ಡೌನ್ ಘೋಷಿಸಿದೆ. ಆದರೆ ಬುಧವಾರ ಕೆಲವು ವಿನಾಯಿತಿಗಳನ್ನು ಪ್ರಕಟಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚೆನ್ನೈ: ಚೆನ್ನೈನಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ರಾಜಧಾನಿಯಲ್ಲಿ ಶುಕ್ರವಾರದಿಂದ ಮತ್ತೆ ಸಂಪೂರ್ಣ ಲಾಕ್ ಡೌನ್ ಘೋಷಿಸಿದೆ. ಆದರೆ ಬುಧವಾರ ಕೆಲವು ವಿನಾಯಿತಿಗಳನ್ನು ಪ್ರಕಟಿಸಿದೆ.

ಇಂದು ತಮಿಳುನಾಡು ಸರ್ಕಾರ ನೀಡಿರುವ ಆದೇಶದ ಪ್ರಕಾರ, ರೈಲ್ವೆ ನಿಲ್ದಾಣ ಮತ್ತು ವಿಮಾನ ನಿಲ್ದಾಣಗಳಿಂದ ಪ್ರಯಾಣಿಕರನ್ನು ಕರೆದೊಯ್ಯಲು ಪೂರ್ವ-ಪಾವತಿಸಿದ ಆಟೋಗಳು, ಟ್ಯಾಕ್ಸಿಗಳು ಮತ್ತು ಖಾಸಗಿ ವಾಹನಗಳಿಗೆ ಅವಕಾಶ ನೀಡಲಾಗಿದೆ.

ಪೊಲೀಸ್ ಸಿಬ್ಬಂದಿ ಈ ವಾಹನಗಳನ್ನು ರೈಲ್ವೆ ನಿಲ್ದಾಣ ಮತ್ತು ವಿಮಾನ ನಿಲ್ದಾಣಗಳಲ್ಲಿ ಪರಿಶೀಲಿಸುತ್ತಾರೆ ಮತ್ತುಇದಕ್ಕಾಗಿ ತಮಿಳುನಾಡು ಇ-ಆಡಳಿತ ಇ-ಪಾಸ್ ನೀಡಲಿದೆ.

ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳ ಪ್ರಧಾನ ಕಚೇರಿಯಲ್ಲಿ ಕನಿಷ್ಠ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.

ಪೆಟ್ರೋಲಿಯಂ ಉತ್ಪನ್ನಗಳು ಮತ್ತು ಎಲ್‌ಪಿಜಿಯಂತಹ ಅ1ಗತ್ಯ ವಸ್ತುಗಳ ವಿತರಕರು ಮತ್ತು ಚಿಲ್ಲರೆ ವ್ಯಾಪಾರಿಗಳಿಗೆ ಸಂಬಂಧಿಸಿದ ನಗದು ವಹಿವಾಟಿಗಾಗಿ ಬ್ಯಾಂಕ್ ಶಾಖೆಗಳು ಜೂನ್ 20 ರಿಂದ ಜೂನ್ 26 ರವರೆಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಕನಿಷ್ಠ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಬಹುದು. ಸಾರ್ವಜನಿಕರಿಗೆ ಯಾವುದೇ ನೇರ ಸೇವೆ ಒದಗಿಸಲು ಅನುಮತಿ ಇಲ್ಲ.

ಅಗತ್ಯ ವಸ್ತು, ಹಾಲು ಮತ್ತು ಕುಡಿಯುವ ನೀರಿನ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಪೆಟ್ರೋಲ್ ಬಂಕ್‌ಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಐಡಿ ಕಾರ್ಡ್‌ಗಳನ್ನು ಕೊಂಡೊಯ್ಯುವುದು, ಎಲ್‌ಪಿಜಿ ಸಿಲಿಂಡರ್‌ಗಳ ವಿತರಣೆಗೆ ಅನುಮತಿ ನೀಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com