ಜಮ್ಮು-ಕಾಶ್ಮೀರ: ಶೋಪಿಯಾನ್ ಜಿಲ್ಲೆಯಲ್ಲಿ ಸೇನೆ ಭರ್ಜರಿ ಕಾರ್ಯಾಚರಣೆ, 5 ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐವರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐವರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ. 

 ಪ್ಯಾಂಪೋರ್'ನ ಮೀಜ್ ಎಂಬಲ್ಲಿರುವ ಮಸೀದಿಯೊಂದರಲ್ಲಿ ಉಗ್ರರು ಅಡಗಿ ಕುಳಿತಿದ್ದು, ಈ ಬಗ್ಗೆ ಮಾಹಿತಿ ತಿಳಿದ ಸೇನಾಪಡೆಗಳು ಮಸೀದಿ ಸುತ್ತುವರೆದು ಭಾರೀ ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು.

ಇದರಂತೆ ಅಡಗು ಕುಳಿತು ದಾಳಿ ನಡೆಸುತ್ತಿದ್ದ ಐವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ. ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎನ್ನಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com