ಕೋವಿಡ್-19: ನವದೆಹಲಿಯಲ್ಲಿ ಪ್ರತಿದಿನ 20 ಸಾವಿರ ಜನರ ಪರೀಕ್ಷೆ, ದೇಶದಲ್ಲಿಯೇ ಅತ್ಯಂತ ಹೆಚ್ಚಿನ ಟೆಸ್ಟಿಂಗ್

ರಾಷ್ಟ್ರ ರಾಜಧಾನಿಯಲ್ಲಿ ದೇಶದಲ್ಲಿಯೇ ಅತಿ ಹೆಚ್ಚಿನ ಸಂಖ್ಯೆಯ  ಕೋವಿಡ್-19 ಪರೀಕ್ಷೆ ನಡೆಸಲಾಗಿದ್ದು, ಗುರುವಾರ 20 ಸಾವಿರ ಮಾದರಿಗಳ ಪರೀಕ್ಷೆ ನಡೆಸಲಾಗಿದೆ ಎಂದು ದೆಹಲಿ ಸರ್ಕಾರದ ಮೂಲಗಳಿಂದ ತಿಳಿದುಬಂದಿದೆ.
ಕೋವಿಡ್-19 ಟೆಸ್ಟಿಂಗ್ ಸಂಗ್ರಹದ ಚಿತ್ರ
ಕೋವಿಡ್-19 ಟೆಸ್ಟಿಂಗ್ ಸಂಗ್ರಹದ ಚಿತ್ರ

ನವದೆಹಲಿ:  ರಾಷ್ಟ್ರ ರಾಜಧಾನಿಯಲ್ಲಿ ದೇಶದಲ್ಲಿಯೇ ಅತಿ ಹೆಚ್ಚಿನ ಸಂಖ್ಯೆಯ  ಕೋವಿಡ್-19 ಪರೀಕ್ಷೆ ನಡೆಸಲಾಗಿದ್ದು, ಗುರುವಾರ 20 ಸಾವಿರ ಮಾದರಿಗಳ ಪರೀಕ್ಷೆ ನಡೆಸಲಾಗಿದೆ ಎಂದು ದೆಹಲಿ ಸರ್ಕಾರದ ಮೂಲಗಳಿಂದ ತಿಳಿದುಬಂದಿದೆ.

ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟರ್ ನಲ್ಲಿ ತಿಳಿಸಿದ್ದಾರೆ. ಪ್ರಸ್ತುತ ದೆಹಲಿ ಜನತೆ ಕೋವಿಡ್-19 ಪರೀಕ್ಷೆ ಮಾಡಿಸಿಕೊಳ್ಳುವುದರಲ್ಲಿ ಯಾವುದೇ ತೊಂದರೆ ಇಲ್ಲ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಟೆಸ್ಟಿಂಗ್ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ದೆಹಲಿಯಲ್ಲಿ ಕೋವಿಡ್-19 ನಿಂದ 1969 ಮಂದಿ ಮೃತಪಟ್ಟಿದ್ದು, ಸೋಂಕಿತರ ಸಂಖ್ಯೆ 49, 979 ಆಗಿದೆ. ರಾಷ್ಟ್ರದಾದ್ಯಂತ ಕಳೆದ 24 ಗಂಟೆಗಳಲ್ಲಿ 336 ಮಂದಿ ಮೃತಪಟ್ಟಿದ್ದು,  ಹೊಸದಾಗಿ 13, 586 ಪ್ರಕರಣಗಳು ಕಂಡುಬಂದಿವೆ. ಇದರೊಂದಿಗೆ ದೇಶದಲ್ಲಿ ಒಟ್ಟಾರೇ, ಮೃತರ ಸಂಖ್ಯೆ 12, 573ಕ್ಕೆ ಏರಿಕೆ ಆಗಿದ್ದು, ಸೋಂಕಿತರ ಸಂಖ್ಯೆ 3 ಲಕ್ಷದ 80 ಸಾವಿರದ 532 ಆಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com