ರಾಮ ಮಂದಿರ
ದೇಶ
ಅಯೋಧ್ಯೆ: ಇಂಡೋ-ಚೀನಾ ಗಡಿ ವಿವಾದ ನಡುವೆ ರಾಮ ಮಂದಿರ ನಿರ್ಮಾಣ ಯೋಜನೆ ಕೆಲಕಾಲ ಸ್ಥಗಿತ!
ಭಾರತ- ಚೀನಾ ಗಡಿ ವಿವಾದ ನಡುವೆ ರಾಮ ಮಂದಿರ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭವನ್ನು ರಾಮ ಮಂದಿರ ಟ್ರಸ್ಟ್ ಕೆಲಕಾಲ ಸ್ಥಗಿತಗೊಳಿಸಿದೆ
ಅಯೋಧ್ಯೆ: ಭಾರತ- ಚೀನಾ ಗಡಿ ವಿವಾದ ನಡುವೆ ರಾಮ ಮಂದಿರ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭವನ್ನು ರಾಮ ಮಂದಿರ ಟ್ರಸ್ಟ್ ಕೆಲಕಾಲ ಸ್ಥಗಿತಗೊಳಿಸಿದೆ. ಈ ಸಂಬಂಧ ಅಧಿಕೃತ ಮಾಹಿತಿ ನೀಡಿರುವ ಟ್ರಸ್ಟ್, ಭಾರತ- ಚೀನಾ ಗಡಿ ಪ್ರದೇಶದಲ್ಲಿ ಪರಿಸ್ಥಿತಿ ಗಂಭೀರವಾಗಿದೆ. ದೇಶವನ್ನು ರಕ್ಷಿಸುವುದು ಅತ್ಯಂತ ಪ್ರಮುಖವಾಗಿದೆ ಎಂದು ಹೇಳಿದೆ.
ಪೂರ್ವ ಲಡಾಖ್ ನ ಗಲ್ವಾನ್ ಕಣಿವೆಯಲ್ಲಿ ಭಾರತ- ಚೀನಾ ಸೇನಾಪಡೆಗಳ ನಡುವಿನ ಸಂಘರ್ಷದಲ್ಲಿ ಭಾರತದ 20 ಯೋಧರು ಹುತಾತ್ಮರಾದ ನಂತರ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಭಾರತೀಯ ಸೈನಿಕರ ಹತ್ಯೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಟ್ರಸ್ಟ್, ನಿರ್ಮಾಣ ಕಾಮಗಾರಿ ಆರಂಭದ ನೂತನ ದಿನವನ್ನು ಶೀಘ್ರದಲ್ಲಿಯೇ ನಿರ್ಧರಿಸಲಾಗುವುದು ಎಂದು ತಿಳಿಸಿದೆ.
ದೇಶದ ಪರಿಸ್ಥಿತಿಯನ್ನು ನೋಡಿಕೊಂಡು ದೇವಾಲಯ ನಿರ್ಮಾಣ ಕಾಮಗಾರಿ ಆರಂಭಿಸುವ ಕುರಿತು ನಿರ್ಧಾರವನ್ನು ಅಧಿಕೃತವಾಗಿ ಘೋಷಿಸಲಾಗುವುದು ಎಂದು ರಾಮ ಮಂದಿರ ಟ್ರಸ್ಟ್ ಸದಸ್ಯ ಅನಿಲ್ ಮಿಶ್ರಾ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ