ದೆಹಲಿಗೆ ಬರುವವರಿಗೆ 5 ದಿನ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್: ಲೆಫ್ಟಿನೆಂಟ್ ಗವರ್ನರ್ ನಿರ್ಧಾರಕ್ಕೆ ಸಿಎಂ ಕೇಜ್ರಿವಾಲ್ ವಿರೋಧ

ಕ್ವಾರಂಟೈನ್ ವಿಚಾರಕ್ಕೆ ಸಂಬಂಧಿಸಿದಂತೆ ಲೆಫ್ಟಿನೆಂಟ್ ಗವರ್ನರ್ ಅನಿಲ್ ಜೈಜಾಲ್ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಡುವೆ ಜಟಾಪಟಿ ಆರಂಭವಾಗಿದೆ. 
ಕೇಜ್ರಿವಾಲ್
ಕೇಜ್ರಿವಾಲ್

ನವದೆಹಲಿ: ಕ್ವಾರಂಟೈನ್ ವಿಚಾರಕ್ಕೆ ಸಂಬಂಧಿಸಿದಂತೆ ಲೆಫ್ಟಿನೆಂಟ್ ಗವರ್ನರ್ ಅನಿಲ್ ಜೈಜಾಲ್ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಡುವೆ ಜಟಾಪಟಿ ಆರಂಭವಾಗಿದೆ. 

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸುವವರಿಗೆ 5 ದಿನ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಎಂದು ಲೆಫ್ಟಿನೆಂಟ್ ಗವರ್ನರ್ ಆದೇಶ ಹೊರಡಿಸಿದ್ದರು.

ಇದೀಗ ಈ ಆದೇಶ ವಿವಾದಕ್ಕೆ ಕಾರಣವಾಗಿದ್ದು, ಆದೇಶ ಕುರಿತು ಸಿಎಂ ಕೇಜ್ರಿವಾಲ್ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. 

ಆದೇಶ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಅವರು ದೆಹಲಿಯಲ್ಲಿ ತುರ್ತು ನಿರ್ವಹಣಾ ಪ್ರಾಧಿಕಾರದ ಜೊತೆಗೆ ಸಭೆ ನಡೆಸಿದ್ದು, ಈ ಸಭೆಯಲ್ಲಿ ಅಸಮಾಧಾನ ಹೊರಹಾಕಿದ್ದಾರೆಂದು ತಿಳಿದುಬಂದಿದೆ. 

ಅಲ್ಪ ಪ್ರಮಾಣದ ಲಕ್ಷಣಗಳು ಕಂಡು ಬಂದರೆ ಮನೆಯಲ್ಲಿಯೇ ಕ್ವಾರಂಟೈನ್ ಮಾಡಲು ಐಸಿಎಂಆರ್ ಸೂಚನೆ ನೀಡಿದೆ. ಈ ಹಂತದಲ್ಲಿ ದೆಹಲಿಗೆ ಆಗಮಿಸಿದವರಿಗೆ ಸಾಂಸ್ಥಿಕ ಕ್ವಾರಂಟೈನ್ ಮಾಡುವ ಅವಶ್ಯಕತೆ ಇರಲಿಲ್ಲ ಎಂದು ಕೇಜ್ರಿವಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆಂದು ವರದಿಗಳು ತಿಳಿಸಿವೆ. 

ದೆಹಲಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಆಸ್ಪತ್ರೆಗಳು ಹಾಗೂ ಆರೋಗ್ಯ ಸಿಬ್ಬಂದಿ ಕೊರತೆ ಸೃಷ್ಟಿಯಾಗಿದೆ. ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಮಾಡಿದರೆ, ಅವರಿಗೆ ಚಿಕಿತ್ಸೆ ನೀಡುವುದು ಹೇಗೆ? ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸುವುದಾದರೂ ಹೇಗೆ ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆಂದು ತಿಳಿದುಬಂದಿದೆ. 

ಕೇಂದ್ರ ಸರ್ಕಾರ 500 ರೈಲ್ವೆ ಕೋಚ್'ಗಳನ್ನು ನೀಡಿದೆ. ಆದರೆ, ದೆಹಲಿಯಲ್ಲಿರುವ ಹವಾಮಾನ ಬಿಸಿಲಿನ ತಾಪಮಾನಕ್ಕೆ ಕೋಚ್ ಗಳಲ್ಲಿ ಕ್ವಾರಂಟೈನ್ ಮಾಡುವುದು ಕಷ್ಟ. ಹೊಸ ಆದೇಶಗಳಿಂದ ತೊಂದರೆಗಳು ಹೆಚ್ಚು ಹೀಗಾಗಿ ಆದೇಶ ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆನ್ನಲಾಗಿದೆ. 

ಈ ಹಿಂದೆ ಕೂಡ ದೆಹಲಿ ಆಸ್ಪತ್ರೆಗಳಲ್ಲಿ ದೆಹಲಿ ನಾಗರೀಕರಿಗೆ ಮಾತ್ರ ಚಿಕಿತ್ಸೆ ನೀಡಲಾಗುತ್ತದೆ ಎಂದು ಕೇಜ್ರಿವಾಲ್ ಆದೇಶ ಹೊರಡಿಸಿದ್ದರು. ಈ ದೇಶವನ್ನು ಲೆಫ್ಟಿನೆಂಟ್ ಗವರ್ನರ್ ಬಹಿರಂಗವಾಗಿ ವಿರೋಧಿಸಿದ್ದರು. ಅಲ್ಲದೆ, ಆದೇಶ ರದ್ದು ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com