ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 14,821 ಹೊಸ ಪಾಸಿಟಿವ್ ಪ್ರಕರಣ, 445 ಕೊರೋನಾ ಸೋಂಕಿತರ ಸಾವು

ಮಾರಕ ಕೊರೋನಾ ವೈರಸ್ ಅಬ್ಬರ ದೇಶಾದ್ಯಂತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಮತ್ತೆ 14,821 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ಮಾರಕ ಕೊರೋನಾ ವೈರಸ್ ಅಬ್ಬರ ದೇಶಾದ್ಯಂತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಮತ್ತೆ 14,821 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಹೌದು.. ದೇಶದ ವಿವಿಧ ರಾಜ್ಯಗಳಲ್ಲಿ ಮತ್ತೆ 14,821 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 4,25,282ಕ್ಕೆ ಏರಿಕೆಯಾಗಿದೆ. ಈ ಪೈಕಿ ಮಹಾರಾಷ್ಟ್ರದಲ್ಲಿ 3870, ದೆಹಲಿಯಲ್ಲಿ 3 ಸಾವಿರ, ತಮಿಳುನಾಡಿನಲ್ಲಿ 2532, ಗುಜರಾತ್ ನಲ್ಲಿ 580 ಮತ್ತು ಕರ್ನಾಟಕದಲ್ಲಿ 453 ಹೊಸ ಪ್ರಕರಣಗಳು ದಾಖಲಾಗಿವೆ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ನಿನ್ನೆ ಒಂದೇ ದಿನ ದೇಶಾದ್ಯಂತ 445 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 13,699ಕ್ಕೆ ಏರಿಕೆಯಾಗಿದೆ.

ಇನ್ನು ದೇಶಾದ್ಯಂತ ನಿನ್ನೆ 9440 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಗುಣಮುಖರಾದ ಒಟ್ಟಾರೆ ಸೋಂಕಿತರ ಸಂಖ್ಯೆ 2, 37, 196ಕ್ಕೆ ಏರಿಕೆಯಾಗಿದೆ. ಅಲ್ಲದೆ 174,387 ಸಕ್ರಿಯ ಪ್ರಕರಣಗಳಿದ್ದು, ದೇಶಾದ್ಯಂತ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com