ಜಮ್ಮು-ಕಾಶ್ಮೀರ: ಸೊಪೋರ್'ನಲ್ಲಿ ಭರ್ಜರಿ ಕಾರ್ಯಾಚರಣೆ, 4 ಉಗ್ರರ ಬಂಧಿಸುವಲ್ಲಿ ಸೇನೆ ಯಶಸ್ವಿ

ಜಮ್ಮು ಮತ್ತು ಕಾಶ್ಮೀರದ ಸೊಪೋರ್ ನಲ್ಲಿ ಭಾರತೀಯ ಸೇನಾಪಡೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಾಲ್ವರು ಉಗ್ರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಬುಧವಾರ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬಾರಾಮುಲ್ಲಾ; ಜಮ್ಮು ಮತ್ತು ಕಾಶ್ಮೀರದ ಸೊಪೋರ್ ನಲ್ಲಿ ಭಾರತೀಯ ಸೇನಾಪಡೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಾಲ್ವರು ಉಗ್ರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಬುಧವಾರ ತಿಳಿದುಬಂದಿದೆ. 

ಸೊಪೋರ್'ನ ಪೊತ್ಕಾ ಮುಕಾಮ್ ಮತ್ತು ಛಾನ್ಪೊರಾ ಅಥೂರಾದಲ್ಲಿ ಉಗ್ರರು ಅಡಗಿ ಕುಳಿತು ತಮ್ಮ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆಂಬ ಮಾಹಿತಿ ತಿಳಿದು ಬರುತ್ತಿದ್ದಂತೆಯೇ ಸೊಪೋರ್'ನ ಪೊಲೀಸರು ಹಾಗೂ 52 ರಾಷ್ಟ್ರೀಯ ರೈಫಲ್ಸ್, ಸಿಆರ್'ಪಿಎಫ್ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಿತ್ತು. 

ಇದರಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆ ನಾಲ್ವರು ಉಗ್ರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳದಲ್ಲಿ ಇನ್ನೂ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com