ಲಡಾಖ್ ಸಂಘರ್ಷ ಕುರಿತು ಚರ್ಚಿಸಲು ವರ್ಚುವಲ್ ಸಂಸತ್ ಅಧಿವೇಶನಕ್ಕೆ ಕಾಂಗ್ರೆಸ್ ಆಗ್ರಹ

ಲಡಾಖ್ ಗಾಲ್ವಾನ್ ಕಣಿವೆಯ ಸಂಘರ್ಷ ವಿಶೇಷವಾಗಿ ಚೀನಾದೊಂದಿಗಿನ ಗಡಿ ಸಂಘರ್ಷದ ಕುರಿತು ಚರ್ಚಿಸಲು ವರ್ಚುವಲ್ ಸಂಸತ್ ಅಧಿವೇಶನ ಕರೆಯುವಂತೆ ಕಾಂಗ್ರೆಸ್ ಗುರುವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.
ಸಂಸತ್ತು
ಸಂಸತ್ತು

ನವದೆಹಲಿ: ಲಡಾಖ್ ಗಾಲ್ವಾನ್ ಕಣಿವೆಯ ಸಂಘರ್ಷ ವಿಶೇಷವಾಗಿ ಚೀನಾದೊಂದಿಗಿನ ಗಡಿ ಸಂಘರ್ಷದ ಕುರಿತು ಚರ್ಚಿಸಲು ವರ್ಚುವಲ್ ಸಂಸತ್ ಅಧಿವೇಶನ ಕರೆಯುವಂತೆ ಕಾಂಗ್ರೆಸ್ ಗುರುವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

1962 ರ ಯುದ್ಧದ ಸಮಯದಲ್ಲಿ, ಆಗ ಬಿಜೆಪಿ ಮುಖಂಡ ಅಟಲ್ ಬಿಹಾರಿ ವಾಜಪೇಯಿ ಅವರು ಸಂಸತ್ತಿನ ಅಧಿವೇಶನವನ್ನು ಕರೆಯಬೇಕೆಂದು ಒತ್ತಾಯಿಸಿದರು ಮತ್ತು ನಂತರ ಪ್ರಧಾನಿ ಜವಾಹರಲಾಲ್ ನೆಹರು ಅವರ ಬೇಡಿಕೆಯನ್ನು ಒಪ್ಪಿಕೊಂಡಿದ್ದರು ಎಂದು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಖೇರಾ ಅವರು, ಮಹತ್ವದ ವಿಷಯಗಳ ಕುರಿತು ಚರ್ಚಿಸಲು ಸಂಸತ್ ಅಧಿವೇಶನ ಕರೆಯಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರತಿಯೊಬ್ಬರೂ ಪ್ರಮುಖ ವಿಷಯಗಳ ಕುರಿತು ಚರ್ಚಿಸಲು ಮತ್ತು ಅವುಗಳನ್ನು ಎದುರಿಸಲು ಒಂದು ಕಾರ್ಯತಂತ್ರವನ್ನು ರೂಪಿಸುವ ಏಕೈಕ ಮಾಧ್ಯಮ ಸಂಸತ್ತು ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com