ಇಂಧನ ದರ ಏರಿಕೆ ವಿರೋಧಿಸಿ ಸೈಕಲ್ ಜಾಥಾ: ದಿಗ್ವಿಜಯ್ ಸಿಂಗ್ ಸೇರಿ ನೂರಾರು ಕೈ ಕಾರ್ಯಕರ್ತರ ವಿರುದ್ಧ ಎಫ್ ಐಆರ್

ದೇಶದಲ್ಲಿ ಸತತವಾಗಿ ಇಂಧನ ದರ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ಸೈಕಲ್ ಜಾಥಾ ನಡೆಸಿದ್ದ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹಾಗೂ ನೂರಾರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಇದೀಗ ಮಧ್ಯ ಪ್ರದೇಶ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.
ದಿಗ್ವಿಜಯ್ ಸಿಂಗ್
ದಿಗ್ವಿಜಯ್ ಸಿಂಗ್
Updated on

ಭೋಪಾಲ್‌: ದೇಶದಲ್ಲಿ ಸತತವಾಗಿ ಇಂಧನ ದರ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ಸೈಕಲ್ ಜಾಥಾ ನಡೆಸಿದ್ದ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹಾಗೂ ನೂರಾರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಇದೀಗ ಮಧ್ಯ ಪ್ರದೇಶ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.

ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಪ್ರತಿಭಟನೆ ಹೆಸರಲ್ಲಿ ನೂರಾರು ಮಂದಿಯನ್ನು ಒಟ್ಟಿಗೆ ಸೇರಿಸಿದ ಆರೋಪದ ಮೇರೆಗೆ ದಿಗ್ವಿಜಯ್ ಸಿಂಗ್ ಮತ್ತು 150 ಕಾರ್ಯಕರ್ತ ವಿರುದ್ಧ ಮಧ್ಯ ಪ್ರದೇಶ ಪೊಲೀಸರು ಇದೀಗ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 341, 188, 143, 269 ಮತ್ತು 270ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನು ನಿನ್ನೆ ಮಧ್ಯ ಪ್ರದೇಶದ ರೋಷನ್‌ಪುರ ಬಳಿಯಿಂದ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್ ನಿವಾಸದವರೆಗೆ ದಿಗ್ವಿಜಯ್ ಸಿಂಗ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ಇಂಧನ ದರ ನಿರಂತರವಾಗಿ ಏರಿಕೆಯಾಗುತ್ತಿರುವುದನ್ನು ವಿರೋಧಿಸಿ ಪಕ್ಷದ ಕಾರ್ಯಕರ್ತರೊಂದಿಗೆ ಬುಧವಾರ ಜಾಥಾದಲ್ಲಿ ಭಾಗವಹಿಸಿದ್ದ ಸಿಂಗ್‌, ದರ ಏರಿಕೆಯು ಪ್ರಧಾನಿ ನರೇಂದ್ರಮೋದಿ ಅವರಿಗೆ ‘ವಿಪತ್ತಿನ ಕಾಲದ ಅವಕಾಶ’ವಾಗಿದೆ ಎಂದು ಟೀಕಿಸಿದ್ದರು.

'ಇಂದು ಜನರು ಕೊರೋನಾ ವೈರಸ್ ಸೋಂಕಿಗೆ ತುತ್ತಾಗುತ್ತಿರುವಾಗ, ಹಣದುಬ್ಬರ ಪ್ರಮಾಣವು ಏರಿಕೆಯಾಗುತ್ತಿದೆ. ಜನರು ಹಸಿವಿನಿಂದ ಸಾಯುತ್ತಿದ್ದಾರೆ. ಕೇಂದ್ರ ಸರ್ಕಾರವು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಸತತವಾಗಿ ಏರಿಕೆ ಮಾಡಿ ಜನರಿಗೆ ಗಾಯದ ಮೇಲೆ ಬರೆ ಹಾಕಿದೆ. ಮೋದಿ ಜೀ ಹೇಳುವಂತೆ, ಇದು ವಿಪತ್ತಿನಿಂದಾದ ಅವಕಾಶ. ಕೊರೋನಾ ದುರಂತವು ಹಣ ಸಂಗ್ರಹಿಸುವುದಕ್ಕೆ ಅವಕಾಶ ಮಾಡಿಕೊಟ್ಟಿದ’ ಎಂದು ಟೀಕಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com