ಕೊರೋನಾ ಮಹಾಮಾರಿ
ಕೊರೋನಾ ಮಹಾಮಾರಿ

ಮಹಾರಾಷ್ಟ್ರ: 24 ಗಂಟೆಗಳಲ್ಲಿ 3890 ಹೊಸ ಕೊರೋನಾ ಪ್ರಕರಣ ಪತ್ತೆ, 208 ಸೋಂಕಿತರ ಸಾವು!

ಭಾರತದಲ್ಲಿ ಕೊರೋನಾ ವೈರಸ್ ಹಾಟ್ ಸ್ಪಾಟ್ ರಾಜ್ಯ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ಬುಧವಾರ ಒಂದೇ ದಿನ 3890 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ಮುಂಬೈ: ಭಾರತದಲ್ಲಿ ಕೊರೋನಾ ವೈರಸ್ ಹಾಟ್ ಸ್ಪಾಟ್ ರಾಜ್ಯ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ಬುಧವಾರ ಒಂದೇ ದಿನ 3890 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ಹೌದು.. ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 3890 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 1,42,900ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ ಒಂದೇ ದಿನ ಮಹಾರಾಷ್ಟ್ರದಲ್ಲಿ208 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 6739ಕ್ಕೆ ಏರಿಕೆಯಾಗಿದೆ. ಅದೇ ರೀತಿ ಮಹಾರಾಷ್ಟ್ರದಲ್ಲಿ ಪ್ರಸ್ತುತ 62,848 ಸಕ್ರಿಯ ಪ್ರಕರಣಗಳಿವೆ.

ಇನ್ನು ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 4161 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಈ ವರೆಗೂ ಗುಣಮುಖರಾದವರ ಸಂಖ್ಯೆ 73,792ಕ್ಕೆ ಏರಿಕೆಯಾಗಿದೆ. ಅಂತೆಯೇ ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಚೇತರಿಕೆ ಪ್ರಮಾಣ ಶೇ.51.64ಕ್ಕೆ ಏರಿಕೆಯಾಗಿದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕೊರೋನಾ ವೈರಸ್ 'ಮಹಾ' ಪೊಲೀಸ್ ತತ್ತರ
ಇನ್ನು ಮಾರಕ ಕೊರೋನಾ ವೈರಸ್ ಗೆ ಮಹಾರಾಷ್ಟ್ರ ಪೊಲೀಸ್ ಇಲಾಖೆ ತತ್ತರಿಸಿ ಹೋಗಿದ್ದು ನಿನ್ನೆ ಮತ್ತೆ 185 ಮಂದಿ ಪೊಲೀಸರಿಗೆ ಕೊರೋನಾ ಸೋಂಕು ದೃಢವಾಗಿದೆ. ಆ ಮೂಲಕ ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಸೋಂಕಿಗೆ ತುತ್ತಾದ ಪೊಲೀಸರ ಸಂಖ್ಯೆ 4288ಕ್ಕೆ ಏರಿಕೆಯಾಗಿದೆ. ಈ ಪೈಕಿ 3239 ಮಂದಿ ಸೋಂಕಿತ ಪೊಲೀಸರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 998 ಮಂದಿ ಪೊಲೀಸರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಅಂತೆಯೇ ನಿನ್ನೆ ಮತ್ತೆ ಇಬ್ಬರು ಸೋಂಕಿತ ಪೊಲೀಸರು ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ. 

Related Stories

No stories found.

Advertisement

X
Kannada Prabha
www.kannadaprabha.com