ಕಾಂಗ್ರೆಸ್ ರಾಜ್ಯಾಧ್ಯಕ್ಷರೊಂದಿಗೆ ರಾಹುಲ್ ಗಾಂಧಿ ಚರ್ಚೆ; ಸರ್ಕಾರದ ವೈಫಲ್ಯ ಖಂಡಿಸಿ ಧರಣಿ ನಡೆಸಲು ತೀರ್ಮಾನ

ಚೀನಾದೊಂದಿಗಿನ ಗಡಿ ವಿವಾದ, ಕೋವಿಡ್-19 ಮತ್ತು ಇಂಧನ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳನ್ನು ಪ್ರತಿಭಟಿಸಿ ವಿರೋಧ ಪಕ್ಷವಾಗಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳನ್ನು ಚರ್ಚಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಕ್ಷದ ರಾಜ್ಯಾಧ್ಯಕ್ಷರುಗಳೊಂದಿಗೆ ನಿನ್ನೆ ವಿಡಿಯೊ ಕಾನ್ಫರೆನ್ಸ್ ಸಂವಾದ ನಡೆಸಿದ್ದರು.
ರಾಹುಲ್ ಗಾಂಧಿ(ಸಂಗ್ರಹ ಚಿತ್ರ)
ರಾಹುಲ್ ಗಾಂಧಿ(ಸಂಗ್ರಹ ಚಿತ್ರ)

ನವದೆಹಲಿ: ಚೀನಾದೊಂದಿಗಿನ ಗಡಿ ವಿವಾದ, ಕೋವಿಡ್-19 ಮತ್ತು ಇಂಧನ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳನ್ನು ಪ್ರತಿಭಟಿಸಿ ವಿರೋಧ ಪಕ್ಷವಾಗಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳನ್ನು ಚರ್ಚಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಕಾಂಗ್ರೆಸ್ ರಾಜ್ಯಾಧ್ಯಕ್ಷರುಗಳೊಂದಿಗೆ ನಿನ್ನೆ ವಿಡಿಯೊ ಕಾನ್ಫರೆನ್ಸ್ ಸಂವಾದ ನಡೆಸಿದ್ದರು.

ಭಾರತ-ಚೀನಾ ಗಡಿಯಲ್ಲಿ ಹುತಾತ್ಮರಾಗಿರುವ 20 ಯೋಧರಿಗೆ ಗೌರವ ವಂದನೆ ಕಾರ್ಯಕ್ರಮವನ್ನು ದೇಶಾದ್ಯಂತ ನಾಳೆ ನಡೆಸಲು ತೀರ್ಮಾನಿಸಲಾಯಿತು. ಇಂಧನ ಬೆಲೆ ಏರಿಕೆ ಪ್ರತಿಭಟಿಸಿ ಎಲ್ಲಾ ರಾಜ್ಯಗಳ ಜಿಲ್ಲಾ ಕೇಂದ್ರಗಳಲ್ಲಿ ಜೂನ್ 29ರಂದು ಧರಣಿ ನಡೆಸಲು ರಾಹುಲ್ ಗಾಂಧಿ ಕಾಂಗ್ರೆಸ್ ನಾಯಕರಿಗೆ ಆದೇಶ ನೀಡಿದರು.

ನಾಳೆ ದೆಹಲಿಯಲ್ಲಿ ನಡೆಯಲಿರುವ ಹುತಾತ್ಮರಿಗೆ ಗೌರವ ವಂದನೆ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಭಾಗವಹಿಸುವ ನಿರೀಕ್ಷೆಯಿದೆ. ಸಂಸತ್ತು ಎದುರು ಇರುವ ಮಹಾತ್ಮಾ ಗಾಂಧಿ ಪ್ರತಿಮೆ ಮುಂದೆ ಕಾರ್ಯಕ್ರಮ ನಡೆಸುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಚರ್ಚಿಸಲು ದೆಹಲಿಯಲ್ಲಿ ಇಂದು ಸಭೆ ಕರೆಯಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com