ಕೈಲಾಗದು ಎಂದು ಕೂರಬಾರದು, ರಾಹುಲ್ ಗಾಂಧಿ ಇನ್ನೊಮ್ಮೆ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಬೇಕು: ಸಚಿನ್ ಪೈಲಟ್

ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇನ್ನೊಮ್ಮೆ ಪಕ್ಷವನ್ನು ಮುನ್ನಡೆಸಬೇಕು ಎಂದು ರಾಜಸ್ಥಾನದ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಹೇಳಿದ್ದಾರೆ.
ರಾಹುಲ್ ಗಾಂಧಿ-ಸಚಿನ್ ಪೈಲಟ್
ರಾಹುಲ್ ಗಾಂಧಿ-ಸಚಿನ್ ಪೈಲಟ್
Updated on: 

ಜೈಪುರ: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇನ್ನೊಮ್ಮೆ ಪಕ್ಷವನ್ನು ಮುನ್ನಡೆಸಬೇಕು ಎಂದು ರಾಜಸ್ಥಾನದ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಹೇಳಿದ್ದಾರೆ. 

ರಾಹುಲ್ ಗಾಂಧಿ ಅವರು ಮತ್ತೊಮ್ಮೆ ಪಕ್ಷದ ಅಧ್ಯಕ್ಷರಾಗಿ ನಮ್ಮನ್ನು ಮುನ್ನಡೆಸಬೇಕು ಎಂಬುದೇ ನಮ್ಮ ಬೇಡಿಕೆ ಎಂದು ಹೇಳಿದ್ದಾರೆ. 

ಚೀನಾದೊಂದಿಗಿನ ಗಡಿ ವಿವಾದವನ್ನು ಸರಿಯಾಗಿ ನಿಭಾಯಿಸಿದ್ದಕ್ಕಾಗಿ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ಬಗ್ಗೆ ರಾಹುಲ್ ಗಾಂಧಿ ಅವರು ನರೇಂದ್ರ ಮೋದಿ ಸರ್ಕಾರದ ಮೇಲೆ ತೀಕ್ಷ್ಣ ವಾಗ್ದಾಳಿ ನಡೆಸುತ್ತಿರುವುದು ನೋಡಿದರೆ ಅವರು ಮತ್ತೊಮ್ಮೆ ಪಕ್ಷದ ಅಧ್ಯಕ್ಷ ಸ್ಥಾನ ಅಲಂಕರಿಸಬೇಕು ಎಂದು ಹೇಳಿದ್ದಾರೆ. 

ಇಂಧನ-ಬೆಲೆ ಏರಿಕೆ ಮತ್ತು ಚೀನಾ-ಭಾರತ ಗಡಿಯಲ್ಲಿನ ಉದ್ವಿಗ್ನತೆಯ ಬಗ್ಗೆಯೂ ಪೈಲಟ್ ಕೇಂದ್ರವನ್ನು ಗುರಿಯಾಗಿಸಿಕೊಂಡು ಮಾತನಾಡಿದ್ದಾರೆ. 

ಗಡಿ ಪರಿಸ್ಥಿತಿ ಬಗ್ಗೆ ಇನ್ನೂ ಗೊಂದಲವಿದೆ. ಇದೇ ವೇಳೆ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಗಳು ನಿರಂತರವಾಗಿ ಏರುತ್ತಿವೆ ಮತ್ತು ಜನರ ಮೇಲೆ ಒತ್ತಡ ಹೇರುತ್ತಿವೆ. ಬೆಲೆ ಏರಿಕೆಯನ್ನು ಹಿಂತೆಗೆದುಕೊಳ್ಳುವಂತೆ ನಾವು ಕೇಂದ್ರವನ್ನು ಒತ್ತಾಯಿಸುತ್ತೇವೆ ಎಂದು ಪೈಲಟ್ ಹೇಳಿದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com