ಅವಂತಿಪೋರಾದಲ್ಲಿ ಎನ್'ಕೌಂಟರ್: ಓರ್ವ ಉಗ್ರನ ಸದೆಬಡಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೋರಾಗದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೋರಾಗದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ. 

ಅವಂತಿಪೋರಾದ ತ್ರಾಲ್'ನ ಛೆನಾ ಉಲಾರ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಸೇನಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು. 

ಸೇನಾಪಡೆಗಳು ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಕೂಡಲೇ ಕಾರ್ಯಾಚರಣೆಯನ್ನು ಎನ್'ಕೌಂಟರ್ ಆಗಿ ಮಾರ್ಪಡಿಸಿದ ಭದ್ರತಾಪಡೆಗಳು ಇದೀಗ ಓರ್ವ ಉಗ್ರನ್ನು ಹತ್ಯೆ ಮಾಡಿದೆ. ಪ್ರಸ್ತುತ ಸ್ಥಳದಲ್ಲಿ ಇನ್ನೂ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com