ತಮಿಳುನಾಡು: ಒಂದೇ ದಿನ 3,940 ಹೊಸ ಕೊರೋನಾ ಸೋಂಕು ಪ್ರಕರಣ ದಾಖಲು, 54 ಸಾವು!

ತಮಿಳುನಾಡಿನಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 3,940 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಚೆನ್ನೈ: ತಮಿಳುನಾಡಿನಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 3,940 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ಹೌದು.. ತಮಿಳುನಾಡಿನಲ್ಲಿ ನಿನ್ನೆ 3,940 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ  ಆ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 82,275ಕ್ಕೆ ಏರಿಕೆಯಾಗಿದೆ. ಈ ಪೈಕಿ 45,537 ಮಂದಿ ಸೋಂಕಿತರು ಗುಣಮುಖಾಗಿದ್ದು, 35,656  ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಅಂತೆಯೇ ನಿನ್ನೆ ತಮಿಳುನಾಡಿನಲ್ಲಿ 54 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಆ ರಾಜ್ಯದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 1,079ಕ್ಕೆ ಏರಿಕೆಯಾಗಿದೆ ಎಂದು ತಮಿಳುನಾಡು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಚೆನ್ನೈಯೊಂದರಲ್ಲೇ 1,992 ಹೊಸ ಸೋಂಕು ಪ್ರಕರಣ ದಾಖಲು
ಇನ್ನು ನಿನ್ನೆ ತಮಿಳುನಾಡಿನಲ್ಲಿ ದಾಖಲಾದ ಒಟ್ಟು 3,940 ಹೊಸ ಕೊರೋನಾ ಸೋಂಕು ಪ್ರಕರಣಗಳ ಪೈಕಿ ಚೆನ್ನೈ ಮಹಾನಗರಿಯೊಂದರಲ್ಲೇ 1,992 ಹೊಸ ಸೋಂಕು ಪ್ರಕರಣ ದಾಖಲಾಗಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com