ಹಿಂದೂ ಸಂಘಟನೆಗಳಿಂದ ಪ್ರತಿಭಟನೆ ಹಿನ್ನಲೆ: ದೆಹಲಿಯ ಶಹೀನ್ ಬಾಗ್ ನಲ್ಲಿ 144 ಸೆಕ್ಷನ್ ಜಾರಿ

ಹಿಂದೂಪರ ಸಂಘಟನೆಗಳು ಮತ್ತೆ ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನಲೆಯಲ್ಲಿ ರಾಜಧಾನಿ ದೆಹಲಿಯ ಶಹೀನ್ ಭಾಗ್ ನಲ್ಲಿ ಪೊಲೀಸರು ನಿಷೇಧಾಜ್ಞೆ ಜಾರಿ ಮಾಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಹಿಂದೂಪರ ಸಂಘಟನೆಗಳು ಮತ್ತೆ ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನಲೆಯಲ್ಲಿ ರಾಜಧಾನಿ ದೆಹಲಿಯ ಶಹೀನ್ ಭಾಗ್ ನಲ್ಲಿ ಪೊಲೀಸರು ನಿಷೇಧಾಜ್ಞೆ ಜಾರಿ ಮಾಡಿದ್ದಾರೆ.

ಶಹೀನ್ ಬಾಗ್ ನಲ್ಲಿ ನಡೆಯುತ್ತಿರುವ ಸಿಎಎ ವಿರೋಧಿ ಪ್ರತಿಭಟನೆಯನ್ನು ನಿಲ್ಲಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಆಗ್ರಹಿಸಿ  ಹಿಂದೂ ಸೇನಾ ನಿನ್ನೆ ಪ್ರತಿಭಟನೆಗೆ ಕರೆ ನೀಡಿತ್ತು. ಈ ಹಿನ್ನಲೆಯಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಳ್ಳುವ ಶಂಕೆ ಮೇರೆಗೆ ಪೊಲೀಸರು ಶಹೀನ್ ಬಾಗ್ ನಲ್ಲಿ ನಿಷೇಧಾಜ್ಞೆ ಜಾರಿಮಾಡಿದ್ದಾರೆ. ಹೀಗಾಗಿ ಯಾವುದೇ ಕಾರಣಕ್ಕೂ ಶಹೀನ್ ಬಾಗ್ ಪ್ರದೇಶದಲ್ಲಿ ಜನರು ಗುಂಪು ಸೇರುವಂತಿಲ್ಲ ಎಂದು ಪೊಲೀಸರು ಆದೇಶ ಹೊರಡಿಸಿದ್ದಾರೆ. 

ಕಳೆದವಾರಷ್ಟೇ ಸಿಎಎ ಪರ-ವಿರೋಧಿ ಬಣಗಳ ನಡುವಿನ ಹಿಂಸಾಚಾರದಲ್ಲಿ 40ಕ್ಕೂ ಹೆ್ಚು ಮಂದಿ ಸಾವನ್ನಪ್ಪಿದ್ದರು. ಅಲ್ಲದೆ 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com