ಶೀಘ್ರದಲ್ಲೇ ವಿಮಾನದಲ್ಲಿ ವೈಫೈ ಸೇವೆಗಳಿಗೆ 'ಕೇಂದ್ರ'ದ ಅನುಮತಿ 

ಮಹತ್ವದ ಬೆಳವಣಿಗೆಯಲ್ಲಿ ವಿಮಾನ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ವಿಮಾನಯಾನ ಸಂಸ್ಥೆಗಳು ವಿಮಾನದಲ್ಲಿ ವೈಫೈ ಸೇವೆಗಳನ್ನು ಪರಿಚಯಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ವಿಮಾನ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ವಿಮಾನಯಾನ ಸಂಸ್ಥೆಗಳು ವಿಮಾನದಲ್ಲಿ ವೈಫೈ ಸೇವೆಗಳನ್ನು ಪರಿಚಯಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಈ ಕುರಿತಂತೆ ಸುದ್ದಿಸಂಸ್ಥೆಯೊಂದು ವರದಿ ಮಾಡಿದ್ದು, ವಿಮಾನಯಾನ ಸಂಸ್ಥೆಗಳು ವಿಮಾನದಲ್ಲಿ ವೈಫೈ ಸೇವೆಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಪೈಲಟ್-ಇನ್-ಕಮಾಂಡ್ ಅನುಮತಿಯ ನಂತರ ವಿಮಾನದಲ್ಲಿರುವ ಪ್ರಯಾಣಿಕರಿಗೆ ಈ ಸೇವೆಯನ್ನು ನೀಡಲಾಗುವುದು.  ಪ್ರಯಾಣಿಕರು ತಮ್ಮ ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು, ಟ್ಯಾಬ್ಲೆಟ್‌ಗಳು, ಇ-ರೀಡರ್‌ಗಳು ಅಥವಾ ಸ್ಮಾರ್ಟ್‌ವಾಚ್‌ಗಳಿಗಾಗಿ ವಿಮಾನದಲ್ಲಿ ವೈಫೈ ಸೇವೆಗಳನ್ನು ಪಡೆಯಬಹುದಾಗಿದೆಎಂದು ನಾಗರಿಕ ವಿಮಾನಯಾನ ಸಚಿವಾಲಯ ಹೇಳಿದೆ ಎನ್ನಲಾಗಿದೆ.

ಇನ್ನು ಸರ್ಕಾರಿ ಅಧಿಕಾರಿಯ ಪ್ರಕಾರ, ವಿಮಾನವು ಟೇಕಾಫ್ ಆದ ನಂತರ ಮತ್ತು ಎಲ್ಲಾ ಬಾಗಿಲುಗಳನ್ನು ಮುಚ್ಚಿದ ನಂತರವೇ ಈ ಸೇವೆಗಳನ್ನು ಪಡೆಯಬಹುದಾಗಿದ್ದು, ವಿಮಾನದಲ್ಲಿ ಅಂತರ್ಜಾಲ ಸೇವೆಯ ಬಳಕೆಯನ್ನು ಮಹಾನಿರ್ದೇಶಕರು ಪ್ರಮಾಣೀಕರಿಸುತ್ತಾರೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com