ಭಯಪಡುವ ಅಗತ್ಯವಿಲ್ಲ: ಕರೋನಾ ವೈರಸ್ ಕುರಿತು ಆತಂಕಕ್ಕೀಡಾಗಿರುವ ದೇಶದ ಜನತೆಗೆ ಪ್ರಧಾನಿ ಮೋದಿ ಅಭಯ!

ಜಗತ್ತನ್ನೇ ಬಿಂಬಡದ ಭೂತದಂತೆ ಕಾಡುತ್ತಿರುವ ಕರೋನಾ ವೈರಸ್ ಇದೀಗ ಭಾರತದಲ್ಲೂ ಕಾಣಿಸಿಕೊಂಡಿದ್ದು ಜನತೆ ಆತಂಕಕ್ಕೀಡಾಗಿದ್ದಾರೆ. ಇನ್ನು ಕರೋನಾ ವೈರಸ್ ವಿರುದ್ದ ಹೋರಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು ಜನರು ಭಯ ಪಡುವ ಅಗತ್ಯವಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ನರೇಂದ್ರ ಮೋದಿ
ನರೇಂದ್ರ ಮೋದಿ
Updated on: 

ನವದೆಹಲಿ: ಜಗತ್ತನ್ನೇ ಬಿಂಬಡದ ಭೂತದಂತೆ ಕಾಡುತ್ತಿರುವ ಕರೋನಾ ವೈರಸ್ ಇದೀಗ ಭಾರತದಲ್ಲೂ ಕಾಣಿಸಿಕೊಂಡಿದ್ದು ಜನತೆ ಆತಂಕಕ್ಕೀಡಾಗಿದ್ದಾರೆ. ಇನ್ನು ಕರೋನಾ ವೈರಸ್ ವಿರುದ್ದ ಹೋರಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು ಜನರು ಭಯ ಪಡುವ ಅಗತ್ಯವಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 

ಕರೋನಾ ವೈರಸ್ ಸನ್ನದ್ಧತೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಪರಿಶೀಲನಾ ಸಭೆ ನಡೆಸಿ ಸೂಕ್ತ ನಿರ್ದೇಶನಗಳನ್ನು ನೀಡಿದ್ದಾರೆ. ಕೊರೋನಾ ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಡಬೇಕಿದೆ. ಇನ್ನು ದೇಶದ ಜನತೆ ಈ ಬಗ್ಗೆ ಭಯ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. 

ಭಾರತಕ್ಕೆ ಆಗಮಿಸುವ ಜನರನ್ನು ಪರೀಕ್ಷಿಸುವುದರಿಂದ ಹಿಡಿದು ತ್ವರಿತ ವೈದ್ಯಕೀಯ ಚಿಕಿತ್ಸೆ ನೀಡುವವರೆಗೆ ವಿವಿಧ ಸಚಿವಾಲಯಗಳು ಮತ್ತು ರಾಜ್ಯಗಳು ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಪ್ರಧಾನಿ ಮೋದಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

"ಹೈ ಫೀವರ್ ಹೊಂದಿರುವ ಏಳು ಪ್ರಕರಣಗಳು ಆಗ್ರಾ ಮತ್ತು ಲಖನೌದಲ್ಲಿ ಪತ್ತೆಯಾಗಿವೆ ಮತ್ತು ಅವರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com