ಜಮ್ಮು-ಕಾಶ್ಮೀರ: ಉಗ್ರ ದಾಳಿಯಲ್ಲಿ ವಿಶೇಷ ಪೊಲೀಸ್ ಅಧಿಕಾರಿ ಹುತಾತ್ಮ, ನಾಗರಿಕ ಸಾವು 

ಜಮ್ಮು-ಕಾಶ್ಮೀರದ ಬರಮುಲ್ಲಾ ಜಿಲ್ಲೆಯ ಸೊಪೊರೆ ಪ್ರದೇಶದಲ್ಲಿ ನಡೆದ ಉಗ್ರರ ದಾಳಿಯಲ್ಲಿ ವಿಶೇಷ ಪೊಲೀಸ್ ಅಧಿಕಾರಿ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.
ಜಮ್ಮು-ಕಾಶ್ಮೀರ: ಉಗ್ರ ದಾಳಿಯಲ್ಲಿ ವಿಶೇಷ ಪೊಲೀಸ್ ಅಧಿಕಾರಿ ಹುತಾತ್ಮ, ನಾಗರಿಕ ಸಾವು 

ಶ್ರೀನಗರ: ಜಮ್ಮು-ಕಾಶ್ಮೀರದ ಬರಮುಲ್ಲಾ ಜಿಲ್ಲೆಯ ಸೊಪೊರೆ ಪ್ರದೇಶದಲ್ಲಿ ನಡೆದ ಉಗ್ರರ ದಾಳಿಯಲ್ಲಿ ವಿಶೇಷ ಪೊಲೀಸ್ ಅಧಿಕಾರಿ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.


ನಿನ್ನೆ ಸಾಯಂಕಾಲ ಸೊಪೊರೆ ಪ್ರದೇಶದಲ್ಲಿರುವ ವರ್ಪೊರಾ ಎಂಬಲ್ಲಿ ಪೊಲೀಸರ ಮೇಲೆ ಉಗ್ರಗಾಮಿಗಳು ಗುಂಡಿನ ಮಳೆಗೈಯಲಾರಂಭಿಸಿದರು. ದಾಳಿಯಲ್ಲಿ ವಿಶೇಷ ಪೊಲೀಸ್ ಅಧಿಕಾರಿ ವಜವತ್ ಅಹ್ಮದ್ ಮತ್ತು ನಾಗರಿಕ ಶೌಕತ್ ಖಾಂಡೆ ಅವರಿಗೆ ತೀವ್ರವಾಗಿ ಗಾಯವಾಗಿತ್ತು.


ಅವರನ್ನು ಆಸ್ಪತ್ರೆಗೆ ದಾಖಲಾಯಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಉಗ್ರರನ್ನು ಬಂಧಿಸಲು ಭದ್ರತಾ ಪಡೆ ಸುತ್ತಮುತ್ತಲ ಪ್ರದೇಶವನ್ನು ಸುತ್ತುವರಿದು ಕಣ್ಗಾವಲು ಇರಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com