ಕೊರೋನಾ ಭೀತಿ ನಡುವೆ 'ಅಟ್ಟುಕಲ್ ಪೊಂಗಲ ಉತ್ಸವ'ದಲ್ಲಿ 45 ಲಕ್ಷ ಮಹಿಳೆಯರು ಪಾಲ್ಗೊಳ್ಳುವ ನಿರೀಕ್ಷೆ

ತಿರುವನಂತಪುರಂ: ಕೇರಳದ ರಾಜಧಾನಿ ತಿರುವನಂತಪುರಂನ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಅಟ್ಟುಕಲ್ ನಲ್ಲಿ ನಾಳೆ ನಡೆಯಲಿರುವ ಪೊಂಗಲ್ ಉತ್ಸವದಲ್ಲಿ ಸುಮಾರು 45 ಲಕ್ಷ ಮಹಿಳೆಯರು ಭಾಗವಹಿಸುವ ನಿರೀಕ್ಷೆಯಿದೆ.
ಕೊರೋನಾ ಭೀತಿ ಹಿನ್ನೆಲೆಯಲ್ಲಿ ಅನಾರೋಗ್ಯದ ಲಕ್ಷಣಗಳು ಕಂಡುಬಂದ ಮಹಿಳೆಯರು ಈ ಉತ್ಸವದಲ್ಲಿ ಪಾಲ್ಗೊಳ್ಳದಂತೆ , ಇನ್ನಿತರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ದೇವಾಲಯದ ಆವರಣ ಹಾಗೂ ಪಾದಚಾರಿ ಮಾರ್ಗಗಳಲ್ಲಿ ಭಕ್ತಾಧಿಗಳು ಈಗಾಗಲೇ ಜಾಗವನ್ನು ಕಾಯ್ದಿರಿಸುತ್ತಿದ್ದಾರೆ. ದೂರದ ಊರುಗಳಿಂದ ಬರುವವರು ಬಸ್ ಹಾಗೂ ರೈಲುಗಳ ಮೂಲಕ ಬರುತ್ತಿದ್ದಾರೆ. ಸಿದ್ಧತಾ ಕಾರ್ಯಗಳು ಪೂರ್ಣಗೊಂಡಿರುವುದಾಗಿ ದೇವಾಲಯದ ಪದಾಧಿಕಾರಿಗಳು ತಿಳಿಸಿದ್ದಾರೆ.
ಪೊಂಗಲ ಉತ್ಸವದಲ್ಲಿ ಭಾಗಿಯಾಗುವ ಭಕ್ತಾಧಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಕೆ. ಶಶಿಧರನ್ ನಾಯ್ಯರ್ ಹೇಳಿದ್ದಾರೆ.
ಭಕ್ತಾಧಿಗಳಿಗಾಗಿ ಹೆಚ್ಚಿನ ಸಂಖ್ಯೆಯ ತಾತ್ಕಾಲಿಕ ಶೌಚಾಲಯಗಳನ್ನು ತೆರೆಯಲಾಗಿದೆ. ಮಹಿಳೆಯರ ಸುರಕ್ಷತೆಗಾಗಿ ಸೂಕ್ತ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ಸಂಚಾರ ನಿರ್ವಹಣೆಗಾಗಿ ಸುಮಾರು 3 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಮಧ್ಯೆ ಕೋವಿಂದ್ 19 ಬಗ್ಗೆ ಯಾವುದೇ ರೀತಿಯ ಭಯ ಪಡಬೇಕಾದ ಅಗತ್ಯವಿಲ್ಲ, ರಾಜ್ಯದಲ್ಲಿ ಅಂತಹ ಪರಿಸ್ಥಿತಿ ಕಂಡುಬಂದಿಲ್ಲ. ಆದಾಗ್ಯೂ, ಜ್ವರ, ಕೆಮ್ಮು ಮತ್ತಿತರ ಲಕ್ಷಣಗಳು ಕಂಡುಬಂದವರು ಅಟ್ಟುಕಲ್ ಪೊಂಗಲ ಉತ್ಸವದಿಂದ ದೂರ ಉಳಿಯುವಂತೆ ಆರೋಗ್ಯ ಸಚಿವೆ ಶೈಲಾಜಾ ಸೂಚನೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


