

ನವದೆಹಲಿ; ನಿನ್ನೆಯಷ್ಟೇ ಬಿಜೆಪಿ ಸೇರ್ಪಡೆಗೊಂಡ ಜ್ಯೋತಿರಾದಿತ್ಯ ಸಿಂಧಿಯಾ ಗುರುವಾರ ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ.
ಜ್ಯೋತಿರಾದಿತ್ಯ ಸಿಂಧಿಯಾ ಅವರ ಸೇರ್ಪಡೆ ಬಿಜೆಪಿಯನ್ನು ಮತ್ತಷ್ಟು ಬಲಪಡಿಸಲಿದ್ದು ಮಧ್ಯ ಪ್ರದೇಶ ಜನರ ಸೇವೆ ಸಲ್ಲಿಸಲು ಬಿಜೆಪಿಗೆ ಇನ್ನಷ್ಟು ಸಹಾಯವಾಗುತ್ತದೆ ಎಂದರು.
ಸಿಂಧಿಯಾ ಅವರನ್ನು ಪಕ್ಷಕ್ಕೆ ಅದ್ದೂರಿ ಸ್ವಾಗತ ಮಾಡಲು ಭೋಪಾಲ್ ನ ಬಿಜೆಪಿ ಕಚೇರಿಯಲ್ಲಿ ಸಿದ್ದತೆ ನಡೆಯುತ್ತಿದೆ. ರೆಡ್ ಕಾರ್ಪೆಟ್, ಪೋಸ್ಟರ್, ಬ್ಯಾನರ್ ಗಳ ವ್ಯವಸ್ಥೆ ಮಾಡಲಾಗಿದೆ. ಸಿಂಧಿಯಾ ಅವರು ನಾಳೆ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ.
ಇನ್ನು ಜ್ಯೋತಿರಾದಿತ್ಯ ಸಿಂಧಿಯಾ ಅವರ ಬಿಜೆಪಿ ಸೇರ್ಪಡೆ ಬಗ್ಗೆ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿ, ದೇವರು ಅವರನ್ನು ಬಿಜೆಪಿಯಲ್ಲಿ ಸುರಕ್ಷಿತವಾಗಿ ಇಡಲಿ ಎಂದಿದ್ದಾರೆ.