ಕೊರೋನಾ ವೈರಸ್ ವಿಭಾಗ
ಕೊರೋನಾ ವೈರಸ್ ವಿಭಾಗ

ಕೊರೋನಾ ವೈರಸ್: ಕೇರಳದಲ್ಲಿ ವೈದ್ಯನಿಗೇ ಸೋಂಕು, 30 ವೈದ್ಯರ ಮೇಲೆ ತೀವ್ರ ನಿಗಾ

ಚಿಕಿತ್ಸೆ ನೀಡುತ್ತಿದ್ದ ವೈದ್ಯನಿಗೂ ಕೊರೋನಾ ವೈರಸ್ ಸೋಂಕು ತಗುಲಿದ ಪರಿಣಾಮ ಕೇರಳದಲ್ಲಿ 30 ವೈದ್ಯರ ಮೇಲೆ ತೀವ್ರ ನಿಗಾ ಇರಿಸಲಾಗಿದೆ.

ಕೊಚ್ಚಿನ್: ಚಿಕಿತ್ಸೆ ನೀಡುತ್ತಿದ್ದ ವೈದ್ಯನಿಗೂ ಕೊರೋನಾ ವೈರಸ್ ಸೋಂಕು ತಗುಲಿದ ಪರಿಣಾಮ ಕೇರಳದಲ್ಲಿ 30 ವೈದ್ಯರ ಮೇಲೆ ತೀವ್ರ ನಿಗಾ ಇರಿಸಲಾಗಿದೆ.

ಹೌದು.. ಮಾರಕ ಕೊರೋನಾ ವೈರಸ್ ವಿರುದ್ಧ ಜೀವದ ಹಂಗು ತೊರೆದು ಹೋರಾಡುತ್ತಿರುವ ವೈದ್ಯರಿಗೂ ಕೊರೋನಾ ಸೋಂಕು ಭೀತಿ ಎದುರಾಗಿದ್ದು, ಚಿಕಿತ್ಸೆ ನೀಡುತ್ತಿದ್ದ ವೈದ್ಯರೊಬ್ಬರಿಗೆ ಸೋಂಕು ತಗುಲಿರುವ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಇತ್ತ  ವೈದ್ಯರ ಸಹೋದ್ಯೋಗಿಗಳ ಮೇಲೂ ತೀವ್ರ ನಿಗಾ ಇರಿಸಲಾಗಿದ್ದು, ಎಲ್ಲ ವೈದ್ಯರನ್ನೂ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ.

ಇತ್ತೀಚೆಗೆ ಸ್ಪೇನ್ ಗೆ ತರೆಳಿದ್ದ ವೈದ್ಯರು ಭಾರತಕ್ಕೆ ವಾಪಸ್ ಆಗಿದ್ದರು. ಬಳಿಕ ಅವರಿಗೆ ಸೋಂಕು ತಗುಲಿರುವುದು ಪತ್ತೆಯಾಗಿತ್ತು. ಹೀಗಾಗಿ ಇದೀಗ ಆ ವೈದ್ಯರನ್ನು ಸಂಪರ್ಕಿಸಿದ್ದ ಇತರೆ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು, ಕುಟುಂಬಸ್ಥರ ಮೇಲೂ ತೀವ್ರ ನಿಗಾ ಇರಿಸಲಾಗಿದೆ ಎಂದು ಕೇರಳ ಸರ್ಕಾರಿ ಮೂಲಗಳು ತಿಳಿಸಿವೆ.

ಇನ್ನು ಭಾರತದಲ್ಲಿ ಕೊರೋನಾ ವೈರಸ್ ಗೆ ತುತ್ತಾದ ಸೋಂಕಿತರ ಸಂಖ್ಯೆ 112ಕ್ಕೆ ಏರಿಕೆಯಾಗಿದ್ದು, ಕರ್ನಾಟಕದಲ್ಲಿ ಈ ವರೆಗೂ ಸೋಂಕಿತರ ಸಂಖ್ಯೆ 7 ಕ್ಕೇರಿದೆ.

Related Stories

No stories found.

Advertisement

X
Kannada Prabha
www.kannadaprabha.com