ಬಿಜೆಪಿ ಸೇರಿದ ಮಧ್ಯ ಪ್ರದೇಶದ 22 ಕಾಂಗ್ರೆಸ್ ರೆಬೆಲ್ ಶಾಸಕರು!

ಕಮಲ್ ನಾಥ್ ಸರ್ಕಾರ ಪತನಕ್ಕೆ ಕಾರಣವಾಗಿದ್ದ 22 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಬಿಜೆಪಿ
ಬಿಜೆಪಿ
Updated on: 

ನವದೆಹಲಿ: ಕಮಲ್ ನಾಥ್ ಸರ್ಕಾರ ಪತನಕ್ಕೆ ಕಾರಣವಾಗಿದ್ದ 22 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. 

ಮೊದಲಿಗೆ ಜ್ಯೋತಿರಾಧಿತ್ಯ ಸಿಂಧಿಯಾ ಬಿಜೆಪಿ ಸೇರಿದ್ದು ಇದೀಗ 22 ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಸಿಂಧಿಯಾ ನೇತೃತ್ವದಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸಮ್ಮುಖದಲ್ಲಿ ಕಾಂಗ್ರೆಸ್ ರೆಬೆಲ್ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. 

ಮಾರ್ಚ್ 20ರ ಸಂಜೆ ಐದು ಗಂಟೆಯೊಳಗೆ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಬಹುಮತ ಸಾಬೀತು ಪಡಿಸುವಂತೆ ಸುಪ್ರೀಂ ಕೋರ್ಟ್ ಗಡುವು ನಿಗದಿ ಮಾಡಿತ್ತು. ಇನ್ನು ಇದಕ್ಕೂ ಮುನ್ನ ಅಂದರೆ ಬೆಳಗ್ಗೆಯೆ ಕಮಲ್ ನಾಥ್ ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. 

ಇದರೊಂದಿಗೆ 15 ತಿಂಗಳ ಕಮಲ್ ನಾಥ್ ಸರ್ಕಾರ ಪತನಗೊಂಡಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com