ಭಾರತದಲ್ಲಿ ಮುಂದುವರೆದ ಕೊರೋನಾ ಮರಣಮೃದಂಗ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, 341ಕ್ಕೇರಿದ ಸೋಂಕಿತರ ಸಂಖ್ಯೆ

ಭಾರತದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಬಿಹಾರದಲ್ಲಿ ವ್ಯಕ್ತಿಯೊರ್ವ ವೈರಸ್ ನಿಂದ ಸಾವನ್ನಪ್ಪಿದ್ದು, ಇದರಂತೆ ದೇಶದಲ್ಲಿ ಕೊರೋನಾ ವೈರಸ್'ಗೆ ಈ ವರೆಗೂ 6 ಮಂದಿ ಬಲಿಯಾಗಿದ್ದಾರಂದು ವರದಿಗಳಿಂದ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ಭಾರದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಬಿಹಾರದಲ್ಲಿ ವ್ಯಕ್ತಿಯೊರ್ವ ವೈರಸ್ ನಿಂದ ಸಾವನ್ನಪ್ಪಿದ್ದು, ಇದರಂತೆ ದೇಶದಲ್ಲಿ ಕೊರೋನಾ ವೈರಸ್'ಗೆ ಈ ವರೆಗೂ 6 ಮಂದಿ ಬಲಿಯಾಗಿದ್ದಾರಂದು ವರದಿಗಳಿಂದ ತಿಳಿದುಬಂದಿದೆ. 

ಕೊರೋನಾ ವೈರಸ್ ನಿಂದ ಬಳಲುತ್ತಿದ್ದ 38 ವರ್ಷದ ಕಿಡ್ನಿ ವೈಫಲ್ಯವುಳ್ಳ ಬಿಹಾರ ವ್ಯಕ್ತಿ ಇಂದು ಸಾವನ್ನಪ್ಪಿದ್ದಾರೆಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮಾಬಹಿತಿ ನೀಡಿದೆ. 

ಪಾಟ್ನಾದ ಏಮ್ಸ್ ಆಸ್ಪತ್ರೆಯಲ್ಲಿ ವ್ಯಕ್ತಿ ಶನಿವಾರ ಮೃತಪಟ್ಟಿದ್ದಾನೆಂದು ತಿಳಿದುಬಂದಿದೆ. ವ್ಯಕ್ತಿ ಕೋಲ್ಕತಾದಿಂದ ಬಿಹಾರ ರಾಜ್ಯಕ್ಕೆ ಎರಡು ದಿನಗಳ ಹಿಂದಷ್ಟೇ ಬಂದಿದ್ದು, ಬಳಿಕ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗುತ್ತಿದೆ. ಇದರಂತೆ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಈ ವರೆಗೂ ದೇಶದಲ್ಲಿ 341 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. 

ಈ ನಡುವೆ ತಮಿಳುನಾಡಿನಲ್ಲಿ ಮತ್ತೊಬ್ಬ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದ್ದು, ತಮಿಳುನಾಡು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com