ಗುಜರಾತ್ ನಲ್ಲಿ ಮತ್ತೆ ಮೂರು  ಕೊರೋನಾ ಪಾಸಿಟಿವ್: ಸೋಂಕಿತರ ಸಂಖ್ಯೆ 33ಕ್ಕೇರಿಕೆ

ಗುಜರಾತ್ ನಲ್ಲಿ ಸದ್ಯ 33 ಮಂದಿಗೆ ಸೋಂಕು ಪತ್ತೆಯಾಗಿದೆ. ಮಂಗಳವಾರ ಮೂರು ಮಂದಿಯಲ್ಲಿ ಕೊರೋನಾ ವೈರಸ್ ಪಾಸಿಟಿವ್ ಆಗಿರುವುದು ಕಂಡು ಬಂದಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಬುಲೆಟಿನ್ ತಿಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಅಹಮದಾಬಾದ್ : ವಿಶ್ವದಾದ್ಯಂತ ಜನರಲ್ಲಿ ಆತಂಕ ಸೃಷ್ಟಿಸಿರುವ ಕೊರೊನಾ ವೈರಸ್ ಗೆ ಈಗಾಗಲೇ ಸಾವಿರಾರು ಮಂದಿ ಬಲಿಯಾಗಿದ್ದಾರೆ. ಚೀನಾದಿಂದ ಆರಂಭವಾದ ಕೊರೊನಾ ವೈರಸ್ ಸೋಂಕು ಭಾರತಕ್ಕೂ ಲಗ್ಗೆ ಇಟ್ಟಿದೆ. ಮಾರಕ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. 

ಗುಜರಾತ್ ನಲ್ಲಿ ಸದ್ಯ 33 ಮಂದಿಗೆ ಸೋಂಕು ಪತ್ತೆಯಾಗಿದೆ. ಮಂಗಳವಾರ ಮೂರು ಮಂದಿಯಲ್ಲಿ ಕೊರೋನಾ ವೈರಸ್ ಪಾಸಿಟಿವ್ ಆಗಿರುವುದು ಕಂಡು ಬಂದಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಬುಲೆಟಿನ್ ತಿಳಿಸಿದೆ.

ಪತ್ತೆಯಾಗಿರುವ ಪ್ರಕರಣಗಳಲ್ಲಿ  ಇಬ್ಬರು ಸ್ಥಳೀಯರಾಗಿದ್ದು, ಮತ್ತೊಬ್ಬರು ಸೌದಿ ಅರೇಬಿಯಾದಿಂದ ವಾಪಾಸಾದರಾಗಿದ್ದಾರೆ. 

ತಮಿಳುನಾಡಿನಲ್ಲಿ ಮತ್ತೆ ಮೂವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು ಅಮೆರಿಕಾದಿಂದ ಆಗಮಿಸಿದ 74 ವರ್ಷದ ವೃದ್ಧ, 54 ವರ್ಷದ ಮಹಿಳೆ ಹಾಗೂ ಸ್ವಿಡ್ಜರ್ ಲ್ಯಾಂಡ್ ನಿಂದ ಆಗಮಿಸಿದ 25 ವರ್ಷದ ಮಹಿಳೆಗೆ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ಪತ್ತೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com