ವಲಸೆ ಕಾರ್ಮಿಕರಿಗೆ ಆಹಾರ, ಆಶ್ರಯ ನೀಡಲು ಎಸ್ ಡಿಆರ್ ನಿಧಿ ಬಳಸಿಕೊಳ್ಳಿ: ರಾಜ್ಯಗಳಿಗೆ ಕೇಂದ್ರ

21 ದಿನಗಳ ಲಾಕ್ ಡೌನ್ ಅವಧಿಯಲ್ಲಿ ವಲಸೆ ಕಾರ್ಮಿಕರಿಗೆ ಆಹಾರ ಮತ್ತು ಆಶ್ರಯ ನೀಡಲು ರಾಜ್ಯ ವಿಪತ್ತು ನಿರ್ವಹಣಾ ನಿಧಿ(ಎಸ್ ಡಿಆರ್ ಎಫ್)ಬಳಸಿಕೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.
ಊರುಗಳಿಗೆ ತೆರಳುತ್ತಿರುವ ಕಾರ್ಮಿಕರು
ಊರುಗಳಿಗೆ ತೆರಳುತ್ತಿರುವ ಕಾರ್ಮಿಕರು
Updated on: 

ನವದೆಹಲಿ: 21 ದಿನಗಳ ಲಾಕ್ ಡೌನ್ ಅವಧಿಯಲ್ಲಿ ವಲಸೆ ಕಾರ್ಮಿಕರಿಗೆ ಆಹಾರ ಮತ್ತು ಆಶ್ರಯ ನೀಡಲು ರಾಜ್ಯ ವಿಪತ್ತು ನಿರ್ವಹಣಾ ನಿಧಿ(ಎಸ್ ಡಿಆರ್ ಎಫ್)ಬಳಸಿಕೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ದೇಶಾದ್ಯಂದ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು 21 ದಿನಗಳ ಲಾಕ್ ಡೌನ್ ಜಾರಿಗೊಳಿಸಿದ್ದು, ಈ ಅವಧಿಯಲ್ಲಿ ವಲಸೆ ಕಾರ್ಮಿಕರಿಗೆ ವೈದ್ಯಕೀಯ ಸೌಲಭ್ಯ, ಬಟ್ಟೆ, ಆಹಾರ ಹಾಗೂ ಆಶ್ರಯ ನೀಡುವುದಕ್ಕಾಗಿ ಎಸ್ ಡಿಆರ್ ನಿಧಿ ಬಳಸಿಕೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ಎಲ್ಲಾ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದೆ.

ಹೊಸ ನಿಯಮಗಳ ಪ್ರಕಾರ, ವಲಸೆ ಕಾರ್ಮಿಕರಿಗೆ ಹಾಗೂ ನಿರಾಶ್ರಿತರಿಗೆ ತಾತ್ಕಾಲಿಕ ಆಶ್ರಯ, ಆಹಾರ, ಬಟ್ಟೆ, ವೈದಕ್ಯೀಯ ಚಿಕಿತ್ಸೆಗಾಗಿ ಎಸ್ ಡಿಆರ್ ಎಫ್ ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ.

ಕೆಲಸ ಹುಡಿಕೊಂಡು ನಗರಗಳಿಗೆ ಬಂದಿದ್ದ ನೂರಾರು ಕಾರ್ಮಿಕರು ಈಗ ಲಾಕ್ ಡೌನ್ ನಿಂದಾಗಿ ತಮ್ಮ ತಮ್ಮ ಊರುಗಳಿಗೆ ನಡೆದುಕೊಂಡು ಹೋಗುತ್ತಿರುವ ದೃಶ್ಯ ಸಾಮಾನ್ಯವಾಗಿದ್ದು, ಇದನ್ನು ತಡೆಯಲು ವಲಸೆ ಕಾರ್ಮಿಕರಿಗೆ ಆಹಾರ ಮತ್ತು ಆಶ್ರಯ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com