ದೇಶ

ಭಾರತದಲ್ಲಿ ಮುಂದುವರೆದ ಕೊರೋನಾ ಮರಣ ಮೃದಂಗ: ಮತ್ತೆ ಮೂವರು ಬಲಿ, ಸಾವಿನ ಸಂಖ್ಯೆ 45ಕ್ಕೆ ಏರಿಕೆ

ಭಾರತದಲ್ಲಿ ಮುಂದುವರೆದ ಕೊರೋನಾ ಮರಣ ಮೃದಂಗ: ಮತ್ತೆ ಮೂವರು ಬಲಿ, ಸಾವಿನ ಸಂಖ್ಯೆ 45ಕ್ಕೆ ಏರಿಕೆ
ಸಂಗ್ರಹ ಚಿತ್ರ
Published On :

ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆಸಿದ್ದು, ಕೇರಳ, ಮಧ್ಯಪ್ರದೇಶ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಮೂವರು ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ವೈರಸ್'ಗೆ ಬಲಿಯಾದವರ ಸಂಖ್ಯೆ 45ಕ್ಕೆ ಏರಿಕೆಯಾಗಿದೆ. 

ಕೇರಳದಲ್ಲಿ  ಬಲಿಯಾದ ವ್ಯಕ್ತಿಯನ್ನು ಅಬ್ದುಲ್ ಅಜೀಜ್ (68) ಎಂದು ಗುರ್ತಿಸಲಾಗಿದ್ದು, ಭಾನುವಾರವಷ್ಟೇ ಇವರಲ್ಲಿ ವೈರಸ್ ದೃಢಪಟ್ಟಿತ್ತು. ಬಳಿಕ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದ ಅವರು, ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಇವರ ಸಾವಿನೊಂದಿಗೆ ಕೇರಳ ರಾಜ್ಯದಲ್ಲಿ ವೈರಸ್ ನಿಂದ ಸಾವಿಗೀಡಾದವರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ. 

ಇದರಂತೆ ಪಶ್ಚಿಮ ಬಂಗಾಳದಲ್ಲಿಯೂ ಸೋಮವಾರ ರಾತ್ರಿ ವೈರಸ್ ಪೀಡಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಹೌರಾ ಜಿಲ್ಲೆ ನಿವಾಸಿಯಾಗಿದ್ದ 40 ವರ್ಷದ ಮಹಿಳೆ ವೈರಸ್'ಗೆ ಬಲಿಯಾಗಿದ್ದು, ಈ ಮೂಲಕ ಪಶ್ಚಿಮ ಬಂಗಾಳದಲ್ಲಿ ಈ ವರೆಗೂ ಸೋಂಕಿಗೆ ಮೂವರು ಬಲಿಯಾಗಿದ್ದಾರೆಂದು ಅಲ್ಲಿನ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 

ಮಧ್ಯಪ್ರದೇಶದಲ್ಲಿಯೂ ವೈರಸ್'ಗೆ ಓರ್ವ ವ್ಯಕ್ತಿ ಇಂದೋರ್ ನಲ್ಲಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಇದರೊಂದಿಗೆ ಮಧ್ಯಪ್ರದೇಶದಲ್ಲಿ ವೈರಸ್'ಗೆ ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಅಲ್ಲದೆ, ಸೋಂಕಿತರ ಸಂಖ್ಯೆ 66ಕ್ಕೆ ಏರಿಕೆಯಾಗಿದೆ ಎಂದು ಅಲ್ಲಿನ ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಮೃತ ಸೋಂಕಿತ ಮಹಳೆ ಉತ್ತರ ಬಂಗಾಳಕ್ಕೆ ಭೇಟಿ ನೀಡಿದ್ದರು. ಆದರೆ, ವಿದೇಶ ಪ್ರಯಾಣದ ಹಿಸ್ಟರಿ ಹೊಂದಿರಲಿಲ್ಲ. ವೈರಸ್ ನಿಂದ ಬಳಲುತ್ತಿದ್ದ ಮಹಿಳೆಯ ರಕ್ತದ ಮಾದರಿಯನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಆದರೆ, ವರದಿಗೂ ಮುನ್ನವೇ ಮಹಿಳೆ ಸಾವನ್ನಪ್ಪಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಕೇರಳದ ತಿರುವನಂತಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 68 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ಈ ನಡುವೆ ಗಡಹ ಸಚಿವಾಲಯ ಮಾಹಿತಿ ನೀಡಿರುವ ಪ್ರಕಾರ ದೇಶದಲ್ಲಿ ಸೋಂಕಿತರ ಸಂಖ್ಯೆ 1,300ಕ್ಕೆ ಏರಿಕೆಯಾಗಿದ್ದು, ಇದರಲ್ಲಿ 120 ಮಂದಿ ಈಗಾಗಲೇ ವೈರಸ್ ನಿಂದ ಗುಣಮುಖರಾಗಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.