ದೇಶ

ದೇಶದಲ್ಲಿ ಕೊರೋನಾ ಆರ್ಭಟ: ಭಾರತದಲ್ಲಿ ಸೋಂಕಿತರ ಸಂಖ್ಯೆ 35,000 ಏರಿಕೆ, ಮಹಾಮಾರಿ ವೈರಸ್'ಗೆ 1,147 ಮಂದಿ ಬಲಿ

ದೇಶದಲ್ಲಿ ಕೊರೋನಾ ಆರ್ಭಟ: ಭಾರತದಲ್ಲಿ ಸೋಂಕಿತರ ಸಂಖ್ಯೆ 35,000 ಏರಿಕೆ, ಮಹಾಮಾರಿ ವೈರಸ್'ಗೆ 1,147 ಮಂದಿ ಬಲಿ
ಸಂಗ್ರಹ ಚಿತ್ರ
Published On :

ನವದೆಹಲಿ: ಲಾಕ್'ಡೌನ್ ತೆರವಿಗೆ ಇನ್ನೂ 3 ದಿನಗಳು ಬಾಕಿ ಇರುವಾಗಲೇ ದೇಶದಲ್ಲಿ ಕೊರೋನಾ ಸಾವಿನ ಸಂಖ್ಯೆ ಶುಕ್ರವಾರ ದಾಖಲೆ ಪ್ರಮಾಣದ ಏರಿಕೆ ಕಂಡಿದೆ. ಮಹಾಮಾರಿ ವೈರಾಣುವಿಗೆ ಈ ವರೆಗೆ ಭಾರತದಲ್ಲಿ ಬಲಿಯಾದವರ ಸಂಖ್ಯೆ 1147ಕ್ಕೆ ಏರಿಕೆಯಾಗಿದೆ. 

ಇದೇ ವೇಳೆ ದೇಶದಲ್ಲಿ 24 ಗಂಟೆಗಳಲ್ಲಿ 1,993 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರಂತೆ ಒಟ್ಟಾರೆ ಸೋಂಕಿತರ ಸಂಖ್ಯೆ 35043ಕ್ಕೆ ಏರಿಕೆಯಾಗಿದೆ. ಇನ್ನು ಒಂದೇ ದಿನದಲ್ಲಿ 73 ಮಂದಿ ಬಲಿಯಾದಿದ್ದು, ಸಾವಿನ ಸಂಖ್ಯೆ ಕೂಡ 1,147ಕ್ಕೆ ಏರಿಕೆಯಾಗಿದೆ.  

ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಮಹಾರಾಷ್ಟ್ರ ರಾಜ್ಯದಲ್ಲಿಯೇ ಅತೀ ಹೆಚ್ಚು ಸೋಂಕಿತರ ಪ್ರಕರಣಗಳು ದಾಖಲಾಗಿವೆ. ಮಹಾರಾಷ್ಟ್ರದಲ್ಲಿ 10,478 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದರೆ, ಗುಜರಾತ್ 4,082, ದೆಹಲಿ 3,515, ಮಧ್ಯಪ್ರದೇಶ 2,660, ರಾಜಸ್ತಾನ 2,438, ಉತ್ತರಪ್ರದೇಶ 2,203, ತಮಿಳುನಾಡು 2,162, ಆಂಧ್ರಪ್ರದೇಶದಲ್ಲಿ 403 ಜನರಲ್ಲಿ ಸೋಂಕು ಪತ್ತೆಯಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.