ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ತಪ್ಪು ಮೌಲ್ಯಮಾಪನ: ಕೇಂದ್ರದ ರೆಡ್ ಜೋನ್ ಪಟ್ಟಿಗೆ ಮಮತಾ ಆಕ್ಷೇಪ

ಕೇಂದ್ರ ಆರೋಗ್ಯ ಸಚಿವಾಲಯ ಪಶ್ಚಿಮ ಬಂಗಾಳದ 10 ಜಿಲ್ಲೆಗಳನ್ನು ರೆಡ್ ಜೋನ್ ಪಟ್ಟಿಗೆ ಸೇರಿಸಿದ್ದು, ಇದು ತಪ್ಪು ಮೌಲ್ಯಮಾಪನ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
Published on

ಕೋಲ್ಕತಾ: ಕೇಂದ್ರ ಆರೋಗ್ಯ ಸಚಿವಾಲಯ ಪಶ್ಚಿಮ ಬಂಗಾಳದ 10 ಜಿಲ್ಲೆಗಳನ್ನು ರೆಡ್ ಜೋನ್ ಪಟ್ಟಿಗೆ ಸೇರಿಸಿದ್ದು, ಇದು ತಪ್ಪು ಮೌಲ್ಯಮಾಪನ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಕೇಂದ್ರ ಆರೋಗ್ಯ ಇಲಾಖೆಗೆ ಪತ್ರ ಬರೆದಿರುವ ಪಶ್ಚಿಮ ಬಂಗಾಳ ಆರೋಗ್ಯ ಇಲಾಖೆ, ಕೇಂದ್ರದ ಮಾರ್ಗಸೂಚಿಯ ಪ್ರಕಾರ ರಾಜ್ಯದ ನಾಲ್ಕು ಜಿಲ್ಲೆಗಳನ್ನು ಮಾತ್ರ ರೆಡೆ ಜೋನ್ ಗೆ ಸೇರಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ.

ರಾಜ್ಯದ ರೆಡ್ ಜೋನ್, ಅರೆಂಜ್ ಜೋನ್ ಮತ್ತು ಗ್ರೀನ್ ಜೋನ್ ಜಿಲ್ಲೆಗಳ ಪಟ್ಟಿಯನ್ನು ಪತ್ರದ ಜೊತೆ ಲಗತ್ತಿಸಲಾಗಿದೆ. ಜಿಲ್ಲಾವಾರು ಕೊರೋನಾ ವೈರಸ್ ಪ್ರಕರಣಗಳನ್ನು ಮತ್ತು ಹೊಸದಾಗಿ ಪತ್ತೆಯಾದ ಪ್ರಕರಣಗಳ ಮಾಹಿತಿಯನ್ನು ನೀಡಲಾಗಿದೆ.

ಈ ಮಧ್ಯ ಕೇಂದ್ರ ಸರ್ಕಾರ ಲಾಕ್ ಡೌನ್ ಅನ್ನು ಮೇ 17ರ ವರೆಗೆ ವಿಸ್ತರಿಸಿದ್ದು, ಅದಕ್ಕು ಮುನ್ನ ದೇಶವ್ಯಾಪಿ ಕೊರೋನಾ ಸೋಂಕು ಅಪಾಯಕಾರಿ ಮಟ್ಟದಲ್ಲಿರುವ ಪ್ರದೇಶಗಳನ್ನು ಗುರುತಿಸಿ, ರೆಡ್, ಅರೆಂಜ್ ಮತ್ತು ಗ್ರೀನ್ ಜೋನ್ ಎಂದು ವರ್ಗೀಕರಿಸಿದೆ. ಅಲ್ಲದೆ ಅರೆಂಜ್ ಮತ್ತು ಗ್ರೀನ್ ಜೋನ್ ಗಳಿಗೆ ಲಾಕ್ ಡೌನ್ ನಿಂದ ಕೆಲವು ವಿನಾಯ್ತಿಗಳನ್ನು ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com